“ಶ್ರೀಶಾರದಾಶ್ರಮದಲ್ಲಿ ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ”.

ಚಳ್ಳಕೆರೆ:-ನಗರದ ಬೆಂಗಳೂರು ರಸ್ತೆಯ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಬಾಪೂಜಿ ಆಯುರ್ವೇದ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ “ವ್ಯಕ್ತಿತ್ವ ನಿರ್ಮಾಣಕಾರಿ ತರಗತಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದ ಆರಂಭದಲ್ಲಿ ಭಜನೆಯನ್ನು ಶ್ರೀಶಾರದಾಶ್ರಮದ ಸ್ವಯಂಸೇವಕ ಯತೀಶ್ ಎಂ ಸಿದ್ದಾಪುರ ನಡೆಸಿಕೊಟ್ಟರೆ “ನನ್ನ ತಾಯಿ ಶಾರದೆ”ಎಂಬ ವಿಷಯದ ಕುರಿತಾಗಿ ಸಂತೋಷಕುಮಾರ್ ಅವರು ಉಪನ್ಯಾಸ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ಈ ಯುವ ತರಗತಿ ಕಾರ್ಯಕ್ರಮದಲ್ಲಿ ಶ್ರೀಶಾರದಾಶ್ರಮದ ಅಧ್ಯಕ್ಷರಾದ ಪೂಜ್ಯ ಮಾತಾಜೀ ತ್ಯಾಗಮಯೀ, ಸ್ವಯಂಸೇವಕರಾದ ಡಾ.ಭೂಮಿಕ, ಉಮೇಶ್ ,ಚೇತನ್, ಪುಷ್ಪ, ಋತ್ವಿಕ್, ಅಂಬಣ್ಣ, ಮನೀಷ್ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

About The Author

Namma Challakere Local News
error: Content is protected !!