ಚಳ್ಳಕೆರೆ‌: ಕುಡಿಯುವ ನೀರಿಗಾಗಿ ಹಾಸ್ಟೆಲ್ ವಿದ್ಯಾರ್ಥಿನಿಯರ ಪರದಾಟ.

ಹೌದು ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿರುವ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಸಮುಚ್ಚಯದಲ್ಲಿ ವಿದ್ಯಾರ್ಥಿನಿಯರಿಗೂ ಹಾಗೂ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕುಡಿಯುವ ನೀರಿಲ್ಲದೆ ಪರದಾಟ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ‌‌.

ಮಧ್ಯಾಹ್ನ ದಿಂದ ಕುಡಿಯುವ ನೀರು ಇಲ್ಲದೆ ವಿದ್ಯಾರ್ಥಿಗಳು ಪರಿತಪಿಸುತ್ತಿರುವುದು ಕಂಡು ಬಂದಿದೆ.

ಸಂಜೆ ಊಟದ ಸಮಯದಲ್ಲಿ ಕುಡಿಯುವ ನೀರು ಇಲ್ಲದೆ ವಿದ್ಯಾರ್ಥಿಗಳು ಹಾಸ್ಟೆಲ್ ನಿಂದ ಹೊರ ಬಂದು ಪ್ರತಿಪಡಿಸುವಂತಹ ದೃಶ್ಯಗಳು ರಾತ್ರೋರಾತ್ರಿ ಕಾಣಬಹುದಾಗಿದೆ.

ಇನ್ನು ಇದಕ್ಕೆ ಸಂಬಂಧಿಸಿದ ಮೇಲಾಧಿಕಾರಿಗಳು ಅತಿ ತುರ್ತಾಗಿ ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಹಾಸ್ಟೆಲ್ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ..

About The Author

Namma Challakere Local News
error: Content is protected !!