ಚಳ್ಳಕೆರೆ :
ಚಳ್ಳಕೆರೆ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಭಕ್ತ ಕನಕದಾಸ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ
ಪಾಲ್ಗೊಂಡು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ತಾಲ್ಲೂಕು ಆಡಳಿತದ ವತಿಯಿಂದ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಭಕ್ತ ಕನಕದಾಸ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಶಶಿಧರ, ನಗರಸಭೆ ಮಾಜಿ ಸದಸ್ಯ ರಾಘವೇಂದ್ರ, ಸದಸ್ಯರುಗಳು, ತಾಲ್ಲೂಕು ಪಂಚಾಯತ್ ಕೆಡಿಪಿ ನಾಮ ನಿರ್ದೇಶನ ಸದಸ್ಯರಾದ ಬಸವರಾಜ್, ಕುರುಬ ಸಮುದಾಯದ ಮುಖಂಡರಾದ ಸುರೇಶ್ ಬಾಬು, ರಾಜಣ್ಣ, ಮಲ್ಲೇಶಪ್ಪ, ಮಲ್ಲಿಕಾರ್ಜುನ್, ಶಿವಲಿಂಗಪ್ಪ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

