ರಕ್ತದಾನ ಮಹಾದಾನ ನಿಕಟ ಪೂರ್ವ ಅಧ್ಯಕ್ಷ ಈ.ರಾಮರೆಡ್ಡಿ.
ನಾಯಕನಹಟ್ಟಿ:: ಯುವಕರು ಮಾದಕ ವಸ್ತುಗಳಿಗೆ ಬಲಿಯಾಗದೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ನಿಕಟ ಪೂರ್ವ ಅಧ್ಯಕ್ಷ ಈ ರಾಮರೆಡ್ಡಿ ಹೇಳಿದರು.
ಅವರು ಸೋಮವಾರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷದ ಮೊಳಕಾಲ್ಮೂರು ವಿಧಾನ ಸಭಾ ನಾಯಕನಹಟ್ಟಿ ಮಂಡಲ ಹಾಗೂ ಸೇವೆ ಮತ್ತು ಸಮರ್ಪಣಾ ಅಭಿಯಾನದಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಯಂ ಪ್ರೇರಿತ ರಕ್ತ ದಾನ – ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು ದಾನಗಳಲ್ಲಿ ಶ್ರೇಷ್ಠವಾದ ದಾನ ರಕ್ತದಾನ ಮತ್ತೊಬ್ಬರ ಜೀವಗೊಳಿಸಲು ಪ್ರತಿಯೊಬ್ಬರು ರಕ್ತದಾನ ಮಾಡುವುದರಿಂದ ತಮ್ಮ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು ಎಂದು ನಿಕಟ ಪೂರ್ವ ಅಧ್ಯಕ್ಷ ಈ ರಾಮರೆಡ್ಡಿ ತಿಳಿಸಿದರು.
ಎಂವೈಟಿ ಸ್ವಾಮಿ ಮಾತನಾಡಿದರು ಭಾರತ ದೇಶ ಕಂಡ ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಇಂತಹ ರಕ್ತದಾನ ಶಿಬಿರ ಮಾಡುವುದರಿಂದ ಮೋದಿಯವರ ಆಯಸ್ಸು ಆರೋಗ್ಯ ವೃದ್ಧಿಸುತ್ತದೆ ಎಂದರು.
ನಾಯಕನಹಟ್ಟಿ ಮಂಡಲ ಅಧ್ಯಕ್ಷ ಚನ್ನಗಾನಹಳ್ಳಿ ಮಲ್ಲೇಶ್ ಮಾತನಾಡಿದರು ಮತದಾನ ಮಾಡುವುದರಿಂದ ನಮ್ಮ ಆರೋಗ್ಯ ಚೆನ್ನಾಗಿರುತ್ತದೆ ಆದ್ದರಿಂದ ಪ್ರತಿಯೊಬ್ಬರೂ ಮೂರು ತಿಂಗಳಿಗೊಮ್ಮೆ ಆದರೂ ರಕ್ತದಾನ ಮಾಡುವುದರಿಂದ ಉತ್ತಮ ಆರೋಗ್ಯವಂತರಾಗದಿರಲು ಸಾಧ್ಯವಾಗುತ್ತದೆ ಎಂದರು.
ಬಿಜೆಪಿ ಮುಖಂಡ ಪಾಪೇಶ್ ನಾಯಕ ಮಾತನಾಡಿದರು ರಕ್ತದಾನ ಎಂಬುದು ಅದು ಪ್ರಾಣದಾನ ಮತ್ತೊಬ್ಬರ ಪ್ರಾಣ ಉಳಿಸಲು ರಕ್ತದ ಅವಶ್ಯಕತೆ ತುಂಬಾ ಮಹತ್ವವಾದದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರ ಹುಟ್ಟು ಹಬ್ಬದ ಪ್ರಯುಕ್ತ ಯುವ ಮೋರ್ಚಾ ವತಿಯಿಂದ ರಥದಾನ ಶಿಬಿರ ಹಮ್ಮಿಕೊಂಡಿರುವುದು ಸಂತಸದ ವಿಷಯ ಎಂದರು.
ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡ ಪಾಪೇಶ್ ನಾಯಕ, ಜಿಲ್ಲಾ ಎಸ್ ಟಿ ಮೋರ್ಚಾ ಅಧ್ಯಕ್ಷ.ಪಿ.ಶಿವಣ್ಣ, ಜಿಲ್ಲಾ ಕಾರ್ಯದರ್ಶಿ ಎಸ್ ಟಿ ಬೋರಸ್ವಾಮಿ, ನಗರ ಘಟಕ ಅಧ್ಯಕ್ಷ ನಾಗರಾಜ್, ಯುವ ಮೋರ್ಚಾ ಅಧ್ಯಕ್ಷ ತ್ರಿಶೂಲ್ ಕುಮಾರ್, ಪ್ರಧಾನ ಕಾರ್ಯದರ್ಶಿ ಗೋವಿಂದಪ್ಪ, ಕಾರ್ಯದರ್ಶಿ ಎಚ್.ವಿ ಪ್ರಕಾಶ್, ನಿಕಟಪೂರ್ವ ರೈತ ಮೋರ್ಚಾ ಅಧ್ಯಕ್ಷ ಬಾಲರಾಜ್ ಯಾದವ್, ಮಂಡಲ ಉಪಾಧ್ಯಕ್ಷ ಎನ್ ತಿಪ್ಪೇಸ್ವಾಮಿ ಗುಂತಕೋಲ್ಮನಹಳ್ಳಿ, ಎಸ್.ಸಿ. ಮೋರ್ಚಾ ಅಧ್ಯಕ್ಷ ಬಿ. ಶಂಕರಸ್ವಾಮಿ, ಮಹಿಳಾ ಮೋರ್ಚಾ ಅಧ್ಯಕ್ಷ ಪವಿತ್ರ ತಿಪ್ಪೇಸ್ವಾಮಿ, ಓಬಿಸಿ ಮೋರ್ಚಾ ಅಧ್ಯಕ್ಷ ರಂಗಸ್ವಾಮಿ, ಕೆ.ಆರ್. ಬೋರಯ್ಯ, ತಾರಕೇಶ್, ಕೆ ಟಿ ಮಂಜಣ್ಣ, ಅಬ್ಬೇನಹಳ್ಳಿ ಶಿವಪ್ರಕಾಶ್, ರೈತ ಮೋರ್ಚ ಪ್ರಧಾನ ಕಾರ್ಯದರ್ಶಿ ಬಿ ಬೋರಯ್ಯ, ತಿಪ್ಪೇಸ್ವಾಮಿ ಇದ್ದರು.

