ಮೊಳಕಾಲ್ಕೂರು: ವಿವಿಧ ಬೇಡಿಕೆ ಈಡೇರಿಸಲು
ಒತ್ತಾಯಿಸಿ ರೈತರ ಪ್ರತಿಭಟನೆ
ಮೊಳಕಾಲೂರು ತಾಲೂಕು ಕಚೇರಿ ಮುಂದೆ ರಾಜ್ಯ ರೈತ ಸಂಘ
ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಬೇಕು ಮತ್ತು ಸಮರ್ಪಕ
ವಿದ್ಯುತ್ ಪೂರೈಸಬೇಕೆಂದು ಒತ್ತಾಯಿಸಿದರು. ಅತಿವೃಷ್ಟಿಯಿಂದ
ಮೆಕ್ಕೆಜೋಳ ಬೆಳೆ ಹಾಳಾಗಿದ್ದು, ಬೆಲೆ ಕುಸಿದಿದೆ. ಕೂಡಲೇ
ಸರ್ಕಾರ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಿ ಬೆಂಬಲ ಬೆಲೆ
ನಿಗದಿಪಡಿಸಬೇಕು ಎಂದು ರೈತರು ಆಗ್ರಹಿಸಿದರು.

