ಚಳ್ಳಕೆರೆ :

ಚಿತ್ರದುರ್ಗ ಜಿಲ್ಲಾಧಿಕಾರಿಗಳ ನೂತನ ಕಟ್ಟಡವನ್ನು ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸುವ ಕುರಿತು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ , ಜಿಲ್ಲಾ ಉಸ್ತೂವಾರಿ ಮಂತ್ರಿ ಡಿ.ಸುಧಾಕರ್, ಶಾಸಕ ಟಿ.ರಘುಮೂರ್ತಿ
ಅವರೊಂದಿಗೆ ಸಭೆ ನಡೆಸಿದರು.

ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಸ್ಥಳ ಪರಿಶೀಲನೆ ನಡೆಸಿ ತಮ್ಮ ಅಭಿಪ್ರಾಯವನ್ನು ಮಂಡಿಸಿದ ನಂತರ, ಈ ಕುರಿತು ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು, ಕಂದಾಯ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲೆಯ ಎಲ್ಲ ಶಾಸಕರು ಮತ್ತು ಸಚಿವರ ಸಭೆಯಲ್ಲಿ ಕೈಗೊಳ್ಳಲು ನಿರ್ಧರಿಸಲಾಯಿತು.

ಈ ಮಹತ್ವದ ಸಭೆಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ರವರು, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಸಿಂಗ್ ಕಟಾರಿಯ, ಜಿಲ್ಲಾಧಿಕಾರಿ ಗಳಾದ ವೆಂಕಟೇಶ , ಚಿತ್ರದುರ್ಗ ಜಿಲ್ಲೆಯ ಸಿಇಒ ಅಶೋಕ್, ಪ್ರಾದೇಶಿಕ ಆಯುಕ್ತರು ಉಪಸ್ಥಿತರಿದ್ದರು.

ಬೆಂಗಳೂರು ನಗರದ ವಿಕಾಸ ಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ ಅವರೊಂದಿಗೆ ಮಹತ್ವದ ಸಭೆಯಲ್ಲಿ ಪಾಲ್ಗೊಂಡರು.

ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಗಳ ಕಟ್ಟಡವನ್ನು ವೈದ್ಯಕೀಯ ಶಿಕ್ಷಣ ಇಲಾಖೆಗೆ ಹಸ್ತಾಂತರಿಸುವುದು ಹಾಗೂ ಹಾಲಿ ಕಟ್ಟಡವನ್ನು ವೈದ್ಯಕೀಯ ಕಾಲೇಜಿನ ಬಳಕೆಗೆ ನೀಡುವ ಕುರಿತು ಸಭೆಯಲ್ಲಿ ಸವಿಸ್ತಾರ ಚರ್ಚೆ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ ಸುಧಾಕರ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಬಗ್ಗೆ ಈಗಾಗಲೇ ಕಂದಾಯ ಸಚಿವರೊಂದಿಗೆ ಚರ್ಚಿಸಿದಂತೆ, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಹಾಗೂ ತಜ್ಞರ ತಂಡವನ್ನು ಸ್ಥಳ ವೀಕ್ಷಣೆಗೆ ಕಳುಹಿಸುವಂತೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾಧಿಕಾರಿಗಳಾದ ವೆಂಕಟೇಶ್, ಜಿಲ್ಲಾ ಪಂಚಾಯತ್ ಸಿಇಒ ಆಕಾಶ್ ಉಪಸ್ಥಿತರಿದ್ದರು…

About The Author

Namma Challakere Local News
error: Content is protected !!