ಚಳ್ಳಕೆರೆ :
ಮಕ್ಕಳೊಂದಿಗೆ ಊಟ ಸವಿದ ಸಿ ಇ ಒ..
ಸೋಮವಾರ ತಡ ರಾತ್ರಿ 8.00 ಗಂಟೆಗೆ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಎಸ್. ಆಕಾಶ್ ರವರು ಚಳ್ಳಕೆರೆ ತಾಲ್ಲೂಕು ಪರುಶುರಾಂಪುರ ಗ್ರಾಮದ ಮೆಟ್ರಿಕ್ ನಂತರದ ಮತ್ತು ಮೆಟ್ರಿಕ್ ಪೂರ್ವ ವಸತಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಹಾಸ್ಟೇಲ್ ನ ಎಲ್ಲಾ ಕೊಠಡಿಗಳಿಗೆ ಮತ್ತು ಶೌಚಾಲಯಕ್ಕೆ ತೆರಳಿ ಈ ಭಾಗದಲ್ಲಿ ಸ್ವಚ್ಛತೆಯನ್ನು ಕಾಪಾಡುವಂತೆ ಅಲ್ಲೇ ಇದ್ದ ಸಿಬ್ಬಂದಿಗಳಿಗೆ ಸೂಚಿಸಿದರು.
ಹಾಗೇ ದಾಸ್ತಾನು ಕೊಠಡಿ ಮತ್ತು ಅಡುಗೆ ಕೋಣೆ ಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು. ಈ ಹಾಸ್ಟೆಲ್ ನಲ್ಲಿ ಇಲ್ಲಿನ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರದ ಜೊತೆಗೆ ಸುಚಿತ್ವ ಮತ್ತು ರುಚಿಕರವಾದ ಆಹಾರವನ್ನು ಮತ್ತು ಶುದ್ಧ ಕುಡಿಯುವ ನೀರನ್ನು ನೀಡಬೇಕೆಂದು ಸೂಚಿಸಿದರು.
ಹಾಗೇ ವಿದ್ಯಾರ್ಥಿಗಳೊಂದಿಗೆ ಊಟವನ್ನು ಸವಿದು, ವಿದ್ಯಾರ್ಥಿಗಳೊಂದಿಗೆ ಸಂವಾದ ನೆಡಿಸಿದರು. ಹಾಸ್ಟೆಲ್ ನ ಒಳಗೂ ಹಾಗೂ ಹೊರಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದರು.
ಹಾಗೇ sslc ವಿದ್ಯಾರ್ಥಿಗಳೊಂದಿಗೆ ಮುಂದಿನ ಶೈಕ್ಷಣಿಕ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನಹರಿಸಿ ಮುಂದಿನ ಭವಿಷ್ಯದ ಕಡೆಗೆ ಒತ್ತು ಕೊಟ್ಟು ಓದುವಂತೆ ತಿಳಿ ಹೇಳಿದರು,
ಮೊಬೈಲ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ವಿದ್ಯಾಭ್ಯಾಸ ಮಾಡಿ ಎಂದು ವಿದ್ಯಾರ್ಥಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಹಾಸ್ಟೆಲ್ ನ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅದೇ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಹಾಜರಾತಿ, ದಾಖಲಾತಿಗಳನ್ನು ನೋಡಿದರು ಮತ್ತು ದಾಸ್ತಾನು ಕೊಠಡಿಗಳಿಗೆ ತೆರಳಿ ಪರಿಶೀಲಿಸಿದರು. ವೈದ್ಯಾಧಿಕಾರಿಗಳು ಹಾಗೂ ನರ್ಸ್ ರವರೊಂದಿಗೆ ಆಸ್ಪತ್ರೆಯ ಬಗ್ಗೆ ಮಾಹಿತಿಯನ್ನು ಪಡೆದರು. ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ಮೊದಲೇ ಆದ್ಯತೆ ನೀಡಿ,ಒಳ ಮತ್ತು ಹೊರ ರೋಗಿಗಳಿಗೆ ಉತ್ತಮವಾದ ಚಿಕಿತ್ಸೆಯನ್ನು ನೀಡಬೇಕೆಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ನಂತರ ಅಲ್ಲೇ ಇದ್ದ ರೋಗಿಗಳ ಆರೋಗ್ಯ ವಿಚಾರಿಸಿ, ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ, ಆರೋಗ್ಯದಲ್ಲಿ ಏನಾದರೂ ಏರು ಪೇರಾದಲ್ಲಿ ಸುತ್ತ ಮುತ್ತಲಿನ ಗ್ರಾಮಸ್ತರು ಈ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಆರೋಗ್ಯ ತಪಾಸಣೆ ಮಾಡಿಸಿ ಕೊಳ್ಳುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು

