ಕೋಡಿಹಳ್ಳಿಯಲ್ಲಿ ಅದ್ದೂರಿಯಾಗಿ ನಡೆದ ಚಿಣ್ಣರ ಕಲರವ ವೈಭವ ಶಾಲಾ ವಾರ್ಷಿಕೋತ್ಸವ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು 2024-25 ರ ಶಾಲಾ ವಾರ್ಷಿಕೋತ್ಸವ ಚಿಣ್ಣರ ಕಲರವ ವೈಭವ ಸಮಾರಂಭಕ್ಕೆ ಭಾಗವಹಿಸಿ ಜ್ಯೋತಿ ಬೆಳಗುವುದರ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ಕೆ ಎಸ್ ಸುರೇಶ್ ಮಾತನಾಡಿ
ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವೋತೋಮುಖ ಬೆಳವಣಿಗೆಗೆ ಪೂರಕವಾಗುತ್ತದೆ, ಅಲ್ಲದೆ ಮಕ್ಕಳಲ್ಲಿ ಅಡಗಿರುವ ಸೂಕ್ತ ಪ್ರತಿಭೆಯನ್ನು ಗುರುತಿಸಿ ಪ್ರದರ್ಶಿಸಲು ಇಂತಹ ವೇದಿಕೆಗಳು ಅವಶ್ಯಕ ಎಂದರು,
ಇಲ್ಲಿನ ಶಾಲಾ ಕೊಠಡಿಗಳ ದುರಸ್ತಿಗೆ ಅನುದಾನವನ್ನು ಅತೀ ಶೀಘ್ರದಲ್ಲಿ ಬಿಡುಗಡೆ ಮಾಡುತ್ತೇನೆ ಎಂದು ಭರವಸೆ ನೀಡಿದರು..
ಈ ಕಾರ್ಯಕ್ರಮದಲ್ಲಿ ಸಿ.ಆರ್.ಪಿ ಶ್ರೀ ಸುರೇಶ್ ಮತ್ತು ಶ್ರೀ ವಿಷ್ಣುವರ್ಧನ್, ಬೇಡರೆಡ್ಡಿಹಳ್ಳಿ ಶಾಲೆಯ ಶಿಕ್ಷಕ ಶ್ರೀ ಸುರೇಶ್
ಗ್ರಾಮ ಪಂಚಾಯಿತಿ ಸದಸ್ಯರಾದ ಎಸ್.ಟಿ ರೇವಣ್ಣ, ಶಿವಮೂರ್ತಿ ಸೇರಿದಂತೆ ಶಿಕ್ಷಕ ಶಿಕ್ಷಕರು ಇದ್ದರು

