ಚಳ್ಳಕೆರೆ : ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಯುವ ಸಾಹಿತಿ ನಾಗರಾಜ್ ಬೆಳಘಟ್ಟ ಇವರು ಬಿಸಿಲು ಬೆಳದಿಂಗಳು, ಮುಗಿಲಿಗೆ ಮನಸ್ಸನ್ನು ಹಾರಲು ಬಿಟ್ಟು, ದೀಪ ಹಾರಿದ ಮೇಲೆ ಮುಂತಾದ ಲೇಖನಗಳನ್ನು ಪ್ರಕಟಿಸಿದ್ದಾರೆ.
ಇವರಿಗೆ ಈಗಾಗಲೇ ಚಿನ್ಮಲಾದ್ರಿ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಪ್ರಶಸ್ತಿ, ದಲಿತ ಸಾಹಿತ್ಯ ಪರಿಷತ್ ವತಿಯಿಂದ ಜಿಲ್ಲಾ ಪ್ರಶಸ್ತಿ, ಇತ್ತೀಚ್ಚಿಗೆ ಜ್ಞಾನ ಶಿಕ್ಷಣ ಮಾಸಪತ್ರಿಕೆ ಹಾಗೂ ವಿವೇಕಾನಂದ ವಿದ್ಯಾ ಸಂಸ್ಥೆ ಬಾಗಲಕೋಟೆ ವತಿಯಿಂದ ಜ್ಞಾನ ಸಂಜೀವಿ ರಾಜ್ಯ ಪ್ರಶಸ್ತಿ ಲಭಿಸಿರುವುದನ್ನು ಸ್ಮರಿಸಬಹುದು.
ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಚಿತ್ರದುರ್ಗ ಜಿಲ್ಲಾ ಆಡಳಿತ ವತಿಯಿಂದ ಏರ್ಪಡಿಸಿದ 76ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ನಾಗರಾಜ್ ಬೆಳಘಟ್ಟ ರವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸಚಿವರಾದ ಡಿ.ಸುಧಾಕರ್ ಶಾಸಕ ವೀರೇಂದ್ರ ಪಪ್ಪಿ ಜಿಲ್ಲಾಧಿಕಾರಿ ವೆಂಕಟೇಶ್ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಾಜ್ ಪೀರ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ. ಗುರುನಾಥ್ ಮುಂತಾದವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸನ್ಮಾನಿತ ನಾಗರಾಜ್ ಬೆಳಘಟ್ಟ ರವರನ್ನು ಕಾಲೇಜಿನ ಪ್ರಾಚಾರ್ಯ ಕೆ. ತಿಮ್ಮಯ್ಯ ಹಾಗೂ ಸಿಬ್ಬಂದಿ ವರ್ಗ ಮತ್ತು ಜಿಲ್ಲಾ ಉಪನ್ಯಾಸಕರ ಸಂಘದ ಮಾಜಿ ಅಧ್ಯಕ್ಷ ಎಸ್. ಲಕ್ಷ್ಮಣ ಅಭಿನಂದಿಸಿದ್ದಾರೆ.

