ರಕ್ತದಾನವು ಒಂದು ಉತ್ತಮವಾದ ಸಾಮಾಜಿಕ ಸೇವೆಯಾಗಿದೆ ಎಂದು ಚಳ್ಳಕೆರೆ ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಮೀರ್ ಪಿ ನಂದ್ಯಾಲ್ ಹೇಳಿದರು…
ನಗರದ ನ್ಯಾಯಾಲಯ ಸಭಾಂಗಣದಲ್ಲಿ ನ್ಯಾಯಾಂಗ ಇಲಾಖೆ, ತಾಲೂಕು ಕಾನೂನು ಸಮಿತಿ ,ಚಳ್ಳಕೆರೆ ವಕೀಲರ ಸಂಘ ಮತ್ತು ಆರೋಗ್ಯ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವದ ದಿನಾಚರಣೆ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಕಾರ್ಯಕ್ರಮದ ಉದ್ಘಾಟನೆ ನೆರೆವೇರಿಸುವವರು.ಅವರು ಮಾತನಾಡಿ.
ರಕ್ತದಾನದಿಂದ ಹಲವರ ಜೀವನ ಉಳಿಸಬಹುದು ಮತ್ತು ಇದು ಮಾನವೀಯ ಸಮಾಜ ನಿರ್ಮಾಣಕ್ಕೆ ಸಹಾಯ ಮಾಡುತ್ತದೆ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡಬಹುದು ಇದರಿಂದ ಒತ್ತಡ ಕಡಿಮೆಯಾಗುತ್ತೆ ಮಾನಸಿಕ ಮತ್ತು ದೈಹಿಕ ಆರೋಗ್ಯ ಸುಧಾರಿಸುತ್ತದೆ ರಕ್ತದಾನದ ಬಗ್ಗೆ ಜನರಲ್ಲಿ ಹರಿವು ಮೂಡಿಸುವುದು ಮತ್ತು ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡಿ ರಕ್ತದಾನದ ಬಗ್ಗೆ ಸಾಕಷ್ಟು ತಿಳುವಳಿಕೆಯಿಂದ ತಿಳಿಸಬೇಕಾಗುತ್ತದೆ ಎಂದರು…
ಜೆ ಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರಾದ ಪುನೀತ್ .ಬಿ ಆರ್ ಮಾತನಾಡಿ….
ಭಾರತದ ಗಣರಾಜ್ಯೋತ್ಸವವು ಪ್ರತಿವರ್ಷ ಜನವರಿ 26 ರಂದು ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ ಹಬ್ಬವಾಗಿದೆ. 1950ರ ಇದೇ ದಿನದಂದು ಭಾರತದ ಸಂವಿಧಾನ ಜಾರಿಗೆ ಬಂದು, ದೇಶವು ಸಾರ್ವಭೌಮ ಪ್ರಜಾಪ್ರಭುತ್ವ ಗಣರಾಜ್ಯವಾಯಿತು. ಈ ದಿನವು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುತ್ತಾ, ಸಂವಿಧಾನದ ಮೌಲ್ಯಗಳಾದ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಎತ್ತಿಹಿಡಿಯುವ, ದೇಶದ ಏಕತೆ ಹಾಗೂ ಪ್ರಗತಿಯನ್ನು ಸಂಭ್ರಮಿಸುವ ವಿಶೇಷ ದಿನವಾಗಿದೆ.. 77ನೇ ಗಣರಾಜ್ಯೋತ್ಸವ ಅಂಗವಾಗಿ ಇಂದು ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಉತ್ತಮವಾದ ಕಾರ್ಯವಾಗಿದೆ. ಶಿಬಿರಗಳಲ್ಲಿ ಹೆಚ್ಚು ಹೆಚ್ಚು ಭಾಗವಹಿಸಿ ರಕ್ತದಾನವನ್ನ ಮಾಡುವ ಮೂಲಕ ಸಾವಿನ ದವಡೆಯಿಂದ ರಕ್ಷಣೆ ಮಾಡಬಹುದಾಗಿದೆ ಎಂದರು. ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಕೆ.ಎಂ.ನಾಗರಾಜ್
ರಕ್ತದಾನ ಜೀವದಾನ
ಒಬ್ಬ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸುವ ಸಲುವಾಗಿ ತನ್ನ ರಕ್ತವನ್ನು ಸ್ವಯಂಪ್ರೇರಣೆಯಿಂದ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ದಾನಮಾಡುವುದಕ್ಕೆ ರಕ್ತದಾನ ಎನ್ನುತ್ತಾರೆ.
ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲದ ಕಾರಣ ರಕ್ತಕ್ಕೆ ಪರ್ಯಾಯವಾದ ವಸ್ತು ಇನ್ನೊಂದಿಲ್ಲ. ರಕ್ತವನ್ನು ಮನುಷ್ಯ ರ ದಾನದಿಂದ ಮಾತ್ರ ಪಡೆಯಲಾಗುತ್ತದೆ. ರಕ್ತ ನಮ್ಮ ದೇಹದ ಅತಿ ಅಮೂಲ್ಯವಾದ ದ್ರವ್ಯವಾಗಿದೆ ರಕ್ತ ಕೊಟ್ಟವರು ಸಹ ಯಾವುದೇ ತೊಂದರೆ ಒಳಗಾಗುವುದಿಲ್ಲ . ದೇಹದಲ್ಲಿ ಹೊಸ ರಕ್ತ ಕಣಗಳು ಉತ್ಪತ್ತಿಯಾಗುತ್ತವೆ ಪ್ರತಿಯೊಬ್ಬರು ರಕ್ತದಾನ ಮಾಡಬಹುದಾಗಿದೆ ಎಂದರು…
ಈ ಕಾರ್ಯಕ್ರಮದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಬಿಟಿ ಶ್ಯಾಮಲ, ಪ್ರಧಾನ ಕಾರ್ಯದರ್ಶಿ ಪರಮೇಶ್ವರ್ ಖಜಾಂಚಿ ಬಿ.ಬಸವರಾಜೇಶ್ವರಿ. ಸೇರಿದಂತೆ ವಕೀಲ ಸಂಘದ ಪದಾಧಿಕಾರಿಗಳು.

