ಚಳ್ಳಕೆರೆ :
ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ಕೌಶಲ್ಯ ರೋಜಗಾರ್ ಮೇಳ, ಹಾಗೂ ಉದ್ಯೋಗ ಮೇಳ 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತೂವಾರಿ ಮಂತ್ರಿ ಡಿ.ಸುಧಾಕರ್ ರವರು ಚಾಲನೆ ನೀಡಿದರು.
ಇನ್ನೂ
ಕೌಶಲ್ಯ ಅಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕೌಶಲ್ಯ ಮಿಷನ್, ಚಿತ್ರದುರ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ ನಡೆದ “ಕೌಶಲ್ಯ ರೋಜ್ ಗಾರ್ ಮೇಳ” ಉದ್ಯೋಗ ಮೇಳ 2025ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಮಾನ್ಯ ಯೋಚನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ಅವರು, ಶಾಸಕರುಗಳಾದ ಟಿ.ರಘುಮೂರ್ತಿ, ಕೆ.ಸಿ. ವೀರೇಂದ್ರ ಪಪ್ಪಿ ರವರು, ಡಾ. ಎಂ ಚಂದ್ರಪ್ಪ ರವರು, ವಿಧಾನ ಪರಿಷತ್ ಸದಸ್ಯರಾದ ಡಿ.ಟಿ.ಶ್ರೀನಿವಾಸ್ ರವರು, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಕಾಂತಮ್ಮ ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ತಾಜ್ ಪೀರ್, ನಗರಸಭೆ ಅಧ್ಯಕ್ಷರಾದ ಸುಮಿತ್ರ ರಾಘವೇಂದ್ರ, ಜಿಲ್ಲಾಧಿಕಾರಿಗಳಾದ ವೆಂಕಟೇಶ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಸೋಮಶೇಖರ್, ಯೋಜನಾ ನಿರ್ದೇಶಕರಾದ ಗಾಯತ್ರಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಟಿ. ವೇಮಣ್ಣ, ಮುಖಂಡರು ಕಾರ್ಯಕರ್ತರು ಹಾಗೂ ವಿವಿಧ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಅಭ್ಯರ್ಥಿಗಳು ಉಪಸ್ಥಿತರಿದ್ದರು.

