ದೀನ ದಯಾಳ್ ಶರ್ಮಾ ದೇಶಕ್ಕೆ ನೀಡಿದ ಕೊಡುಗೆ ಅಪಾರ:ಬಿ.ಎಂ ಸುರೇಶ್ 

ಚಳ್ಳಕೆರೆ:ಭಾರತೀಯ ಜನಸಂಘದ ಮೂಲಕ ದೇಶದಲ್ಲಿ ಜಾಗೃತಿ ಮೂಡಿಸಿ ದೇಶವನ್ನು ಸದೃಢವಾಗಿ ಕಟ್ಟಲು ಶ್ರಮಿಸಿದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಆದರ್ಶವನ್ನು ನಾವೆಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಬಿ.ಎಂ ಸುರೇಶ್ ತಿಳಿಸಿದರು.

ನಗರದ ಪಕ್ಷದ ಕಚೇರಿಯಲ್ಲಿ ದೀನದಯಾಳ್ ಉಪಾಧ್ಯಾಯರವರ 109ನೇ ಜನ್ಮ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ಮುಖ್ಯ ವಾಹಿನಿಗೆ ತರುವ ಕೆಲಸವನ್ನು ಮಾಡಿದಾಗ ಮಾತ್ರ ದೇಶ ಉಳಿಯಲು ಸಾಧ್ಯ ಎಂಬುದು ದೀನ ದಯಾಳ್ ರವರ ಮೂಲ ತತ್ವವಾಗಿತ್ತು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರಾದ ದಿನೇಶ್ ರೆಡ್ಡಿ ಪ್ರಧಾನ ಕಾರ್ಯದರ್ಶಿ ಸುರೇಶ್ ಭಾಗವಹಿಸಿದ್ದರು.

About The Author

Namma Challakere Local News
error: Content is protected !!