ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ. ಸಭೆಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ ಸುಧಾಕರ್ , ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಟಿ ರಘುಮೂರ್ತಿ
ಪಾಲ್ಗೊಂಡು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಜಿಲ್ಲಾ ಕೆಡಿಪಿ ಸಭೆಯಲ್ಲಿ ಪಾಲ್ಗೊಂಡು ಕ್ಷೇತ್ರ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಬಗ್ಗೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ ಸುಧಾಕರ್ ರವರು, ಜಿಲ್ಲಾ ಉಸ್ತುವಾರಿಗಳಾದ ಆದಿತ್ಯ ಆಮ್ಲಾನ್ ಬಿಸ್ವಾಸ್ , ಜಿಲ್ಲಾಧಿಕಾರಿಗಳಾದ ವೆಂಕಟೇಶ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ಡಾ ಆಕಾಶ್, ಪೊಲೀಸ್ ವರಿಷ್ಠಾಧಿಕಾರಿಗಳಾದ ರಂಜಿತ್ ಕುಮಾರ್ ಭಂಡಾರು, ಹೊಸದುರ್ಗ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಆಹಾರ ನಿಗಮದ ಅಧ್ಯಕ್ಷರಾದ ಬಿಜಿ ಗೋವಿಂದಪ್ಪ ರವರು, ಹೊಳಲ್ಕೆರೆ ಶಾಸಕರಾದ ಡಾ ಎಂ ಚಂದ್ರಪ್ಪ ರವರು, ವಿಧಾನ ಪರಿಷತ್ ಸದಸ್ಯರಾದ ಡಿಟಿ ಶ್ರೀನಿವಾಸ ರವರು, ಕೆ.ಎಸ್.ನವೀನ್ ರವರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!