ಚಳ್ಳಕೆರೆ : ತಾಲೂಕಿನಲ್ಲಿ ಇತ್ತೀಚಿಗೆ ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚಾಗುತ್ತಿವೆ ಆದ್ದರಿಂದ ಅಧಿಕಾರಿಗಳು ಕಾರ್ಯನಿರತರಾಗಿ ತಮ್ಮ ವ್ಯಾಪ್ತಿಯ ಬರುವಂತಹ ಎಲ್ಲಾ ಗ್ರಾಮಗಳಲ್ಲಿ ಹದ್ದಿನ ಕಣ್ಣು ಇಡುವ ಮೂಲಕ ಪರಿಶೀಲನೆ ನಡೆಸಬೇಕು ಎಂದು ತಹಶೀಲ್ದಾರ್ ರೆಹನ್ ಪಾಷಾ ಅಧಿಕಾರಿಗಳಿಗೆ ಸೂಚಿಸಿದರು.
ಅವರು ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಬಾಲ್ಯ ವಿವಾಹ ನಿಷೇಧ ಕಾಯ್ಸೆಯ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಚಳ್ಳಕೆರೆ ತಾಲೂಕಿನ ರೆಡ್ಡಿಹಳ್ಳಿ ಪ್ರಕರಣ ರಾಜ್ಯದಲ್ಲಿ ಸಂಚಲನ ಮೂಡಿಸಿದೆ ಆದರೆ ಇಂತಹ ಪ್ರಕರಣಗಳು ಜರಗಬಾರದು ಅಧಿಕಾರಿಗಳ ಕಣ್ ತಪ್ಪಿನಿಂದ ಆದಂತ ಈ ಪ್ರಕರಣಗಳು ಮುಂದಿನ ದಿನಗಳಲ್ಲಿ ಇಂತಹ ಯಾವುದೇ ಅಹಿತಕರ ಘಟನೆ ಜರುಗದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕ್ರಮವಹಿಸಬೇಕೆಂದು ಸೂಚಿಸಿದರು.
ಇನ್ನು ಶಿಶು ಅಭಿವೃದ್ಧಿ ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿ ಮಾತನಾಡಿ ತಾಲೂಕಿನಲ್ಲಿ ಕಳೆದ ವರ್ಷ ಹಾಗೂ 2025 ರಂದು ಪೋಕ್ಸೋ ಪ್ರಕರಣಗಳು ನಿಯಂತ್ರಣ ವಾಗಲಿವೆ, ಇನ್ನೂ ಶಿಕ್ಷಣ ಇಲಾಖೆಯಲ್ಲಿ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸಬೇಕು, ಮಕ್ಕಳ ಸಹಾಯವಾಣಿ1098 ಕರೆ ಮಾಡುವ ಮೂಲಕ ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಬೇಕು ಎಂದರು.
ಇದೇ ಸಂಧರ್ಭದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಇತರರು ಇದ್ದರು.


