ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್‍ಗೆ ಸನ್ಮಾನ


ಚಿತ್ರದುರ್ಗ(ಕರ್ನಾಟಕ ವಾರ್ತೆ)ಜೂ.11:
ಆರೋಗ್ಯ ಇಲಾಖೆಯ ವಿವಿಧ ಸಂಸ್ಥೆಗಳಲ್ಲಿ ಸತತ 30 ವರ್ಷ ಸೇವೆ ಸಲ್ಲಿಸಿ ಈಚೆಗೆ ನಿವೃತ್ತಿ ಹೊಂದಿದ ಆರೋಗ್ಯ ನಿರೀಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಅವರಿಗೆ ಜಿಲ್ಲಾ ಮತ್ತು ತಾಲೂಕು ಮಟ್ಟದಿಂದ ಗೌರವ ಸಮರ್ಪಣೆ ಮುಖಾಂತರ ಸನ್ಮಾನಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಮಾತನಾಡಿ, ಆರೋಗ್ಯ ಇಲಾಖೆ ಕಾರ್ಯಕ್ರಮಗಳನ್ನು ಸಾರ್ವಜನಿಕ ವಲಯಕ್ಕೆ ತಲುಪಿಸುವ ಮುಖಾಂತರ ಮಾಧ್ಯಮಗಳಲ್ಲಿ ಪ್ರಚಾರ ಕಾರ್ಯ ಕೈಗೊಂಡು ಉತ್ತಮ ಕೆಲಸ ನಿರ್ವಹಿಸಿದ ಮಂಜುನಾಥ್ ಅವರ ನಿವೃತ್ತಿ ಜೀವನ ಆರೋಗ್ಯವಾಗಿರಲಿ ಎಂದು ಶುಭ ಹಾರೈಸಿದರು.
ತಾಲೂಕ ಆರೋಗ್ಯ ಅಧಿಕಾರಿ ಡಾ.ಬಿ.ವಿ. ಗಿರೀಶ್ ಮಾತನಾಡಿ, ಆರೋಗ್ಯ ಇಲಾಖೆಯ ನೌಕರರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿ, ಮಂಜುನಾಥ್ ಅವರು ನಿವೃತ್ತಿ ಹೊಂದಿರುತ್ತಾರೆ. ಅವರ ಮುಂದಿನ ಜೀವನ ಸುಖಮಯವಾಗಿರಲಿ ಎಂದರು.
ಇದೇ ಸಂದರ್ಭದಲ್ಲಿ ತಾಲೂಕಾ ಆರೋಗ್ಯ ಅಧಿಕಾರಿಗಳ ಪುತ್ರ ಆರ್ಯನ್ ವೀರ ಅವರು ಎಸ್‍ಎಸ್‍ಎಲ್‍ಸಿ ಐಸಿಐಸಿ ಪಠ್ಯಕ್ರಮದಲ್ಲಿ ದಾವಣಗೆರೆ ಮತ್ತು ಚಿತ್ರದುರ್ಗ ಪ್ರಾಂತೀಯ ಮಟ್ಟದಲ್ಲಿಯೇ ಅತಿ ಹೆಚ್ಚು ಅಂಕ ಗಳಿಸಿ ತೇರ್ಗಡೆಯಾದ್ದರಿಂದ ಕಾರ್ಯಕ್ರಮದಲ್ಲಿ ಆರ್ಯನ್ ಅವರ ಫೋಷಕರಿಗೂ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಎಲ್ಲಾ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಇದ್ದರು.

About The Author

Namma Challakere Local News
error: Content is protected !!