ಚಿತ್ರದುರ್ಗ: ಒತ್ತಡದ ನಡುವೆ ಕ್ರೀಡೆಯಲ್ಲಿ ಭಾಗವಹಿಸಿ
ಚಿತ್ರದುರ್ಗ ಪ್ರಧಾನ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಧೀಶರಾದ
ರೋಣ್ ವಾಸುದೇವ್ ಅವರು, ಕೆಲಸದ ಒತ್ತಡದ ನಡುವೆಯೂ
ಪೊಲೀಸ್ ಸಿಬ್ಬಂದಿ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ
ಭಾಗವಹಿಸಬೇಕು ಎಂದು ಕರೆ ನೀಡಿದರು. ಚಿತ್ರದುರ್ಗದಲ್ಲಿ
ನಡೆದ ಪೊಲೀಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ
ಅವರು, ವಾರ್ಷಿಕ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಆರೋಗ್ಯ
ಕಾಪಾಡಿಕೊಳ್ಳುವಂತೆ ತಿಳಿಸಿದರು. ಜಿಲ್ಲೆಯಿಂದ 15ಕ್ಕೂ
ಹೆಚ್ಚು ಪೊಲೀಸ್ ಸಿಬ್ಬಂದಿ ರಾಜ್ಯ ಹಾಗೂ ರಾಷ್ಟ್ರಮಟ್ಟದ
ಕ್ರೀಡಾಕೂಟಗಳಲ್ಲಿ ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿ
ಎಂದು ಅವರು ಹೇಳಿದರು.

About The Author

Namma Challakere Local News
error: Content is protected !!