ನಾಯಕನಹಟ್ಟಿ::ಪಟ್ಟಣದಲ್ಲಿ ಕಾನೂನನ್ನು ಮೀರಿ ನಿಯಮಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಂಬಾಕು ನಿಯಂತ್ರಣ ಅಧಿಕಾರಿ ಪ್ರಭಾಕರ್ ಎಚ್ಚರಿಕೆ ನೀಡಿದರು.
ಅವರು ಬುಧವಾರ ನಾಯಕನಹಟ್ಟಿ ಪಟ್ಟಣದ ಪೋಲಿಸ್ ಠಾಣೆ ಬಳಿಯಿಂದ ಬಸ್ ಸ್ಟ್ಯಾಂಡ್ ಸೇರಿದಂತೆ ಇತರೆ ಕಡೆಗಳ ತಂಬಾಕು ಮಾರಾಟದ ಅಂಗಡಿಗಳ ಮೇಲೆ ದಾಳಿ ನಡೆಸಿ ಅನಧಿಕೃತ ಉತ್ಪನ್ನಗಳನ್ನು ವಶಪಡಿಸಿಕೊಂಡು ದಂಡ ವಿಧಿಸಲಾಯಿತು ನಂತರ ಮಾತನಾಡಿದ ಅವರು ತಂಬಾಕು ನಿಯಂತ್ರಣ ಕಾಯ್ದೆ ರಾಜ್ಯದಲ್ಲಿ ಜಾರಿಯಲ್ಲಿದ್ದು ನಿಯಮಗಳನ್ನು ಮೀರಿ ಶಾಲಾ ಕಾಲೇಜುಗಳ ಆವರಣದಲ್ಲಿ ಹಾಗೂ ಅಪ್ರಾಪ್ತ ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ಧ ಸೂಕ್ತ ಕಠಿಣ ಕ್ರಮ ಕೈಗೊಂಡು ದಂಡ ವಿಧಿಸಿ ದಸ್ತಗಿರಿ ಮಾಡಲಾಗುವುದು ಈಗಾಗಲೇ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದ್ದು ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿದ್ದು ಎಚ್ಚರಿಕೆ ನೀಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ತಂಬಾಕು ನಿಯಂತ್ರಣ ಅಧಿಕಾರಿ ಬಿ ಎಂ ಪ್ರಭುದೇವ, ತಿಪ್ಪೇಸ್ವಾಮಿ, ನಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಬಿ ಸತೀಶ್, ಪಟ್ಟಣದ ಪೊಲೀಸ್ ಠಾಣೆಯ ಎಎಸ್ಐ ತಿಪ್ಪೇಸ್ವಾಮಿ, ಸೇರಿದಂತೆ ಇತರರು ಇದ್ದರು