ಚಳ್ಳಕೆರೆ : ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 20 ವರ್ಷಗಳ ಅವಧಿಯಲ್ಲಿ 16 ವರ್ಷಗಳು ಸರ್ಕಾರದಿಂದ ಘೋಷಿತ ಬರವನ್ನು ಜಿಲ್ಲೆ ಅನುಭವಿಸಿದ್ದು, ರೈತರು ಸಂಕಷ್ಟದ ಪರಿಸ್ಥಿತಿಯನ್ನು ಅನುಭವಿಸಿದ್ದಾರೆ,

ಅದರಂತೆ ಇಂದು ಕೇಂದ್ರ ಬರ ಅಧ್ಯಯನ ತಂಡ ಚಿತ್ರದುರ್ಗ ತಾಲ್ಲೂಕಿನ ಐಯ್ಯನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾರಗಟ್ಟ ಗ್ರಾಮದ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ
ಗೋಕಟ್ಟೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಕೇಂದ್ರ ಬರ ಪರಿಶೀಲನಾ ಅಧಿಕಾರಿಗಳ ತಂಡ ಆಗಮಿಸಿ ಕೂಲಿಕಾರರೊಂದಿಗೆ ಸಂವಾದ ನೆಡೆಸಿದರು.

ಇನ್ನೂ‌ ಜಿಲ್ಲೆಯಲ್ಲಿ ಬೀಕರ ಬರಗಾಲದ ಚಾಯೆ ಆವರಿಸಿದ್ದು ಇದಕ್ಕೆ ಪೂರಕವಾಗಿ ಜಿಲ್ಲೆಯ ಜಾನುವಾರುಗಳು, ಹಾಗೂ ಮನುಷ್ಯ ಸಂಕುಲಕ್ಕೆ ತುಂಬಾ ಸಂಕಷ್ಟದ ಪರಸ್ತಿತಿ ಎದುರಾಗಿದೆ ಆದ್ದರಿಂದ ರಾಜ್ಯದ ಅತೀ ಬರಗಾಲಕ್ಕೆ ತುತ್ತಾದ ಬಯಲು ಸೀಮೆ ಎಂದು ಕೇಂದ್ರ ತಂಡಕ್ಕೆ ಮನವರಿಕೆ ಮಾಡಿಕೊಟ್ಟರು.

ತಂಡದೊಂದಿಗೆ ಜಿಲ್ಲೆಯ ಬರ ಅಧ್ಯಯನಕ್ಕಾಗಿ ಆಗಮಿಸಿದ ಕೇಂದ್ರ ಜಲಶಕ್ತಿ ಆಯೋಗದ ನಿರ್ದೇಶಕ ವಿ.ಅಶೋಕ್ ಕುಮಾರ್ ಎಂ.ಎನ್.ಸಿ.ಎಫ್.ಸಿ ಉಪನಿರ್ದೇಶಕ ಕರಣ್ ಚೌಧರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪಕಾರ್ಯದರ್ಶಿ ಸಂಗೀತ್ ಕುಮಾರ್ ಹಾಗೂ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಹಿರಿಯ ಸಲಹೆಗಾರ ಡಾ. ಶ್ರೀನಿವಾಸ ರೆಡ್ಡಿ. ಜಿಲ್ಲಾ ಪಂಚಾಯತ್ ಸಿಇಒ ಸೋಮಶೇಖರ್, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಕಾರ್ತಿಕ್, ,, ನಿರ್ದೇಶಕ ಮಂಜುನಾಥ್, ತೋಟಗಾರಿಕೆ ಉಪನಿರ್ದೇಶಕಿ ಸವಿತಾ , ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!