ಚಳ್ಳಕೆರೆ : ಕಾಡುಗೊಲ್ಲ- ಹಟ್ಟಿಗೊಲ್ಲ ಸಮುದಾಯದ ಜಾತಿ ಪ್ರಮಾಣ ಪತ್ರ ಹಾಗೂ ಸಿಂದುತ್ವ ಪ್ರಮಾಣ ಪತ್ರ ನೀಡುವಂತೆ ಸಮುದಾಯದ ಮುಖಂಡರುಗಳು ಹಾಗೂ ಅಧಿಕಾರಿಗಳ ಮಹತ್ವದ ಸಭೆ ಇದಾಗಿದೆ ನಿಮ್ಮ ಅವಲುಗಳನ್ನು ಯಥಾವತ್ತಾಗಿ ಜಿಲ್ಲಾಧಿಕಾರಿಗಳಿಗೆ ರವಾನಿಸಿ ಜಾತಿ ಪ್ರಮಾಣ ಪತ್ರ ನೀಡಲು ಕಾನೂನು ಬದ್ದವಾಗಿ ನೀಡಲಾಗುವುದು ಎಂದು ತಹಶೀಲ್ದಾರ್ ರೇಹಾನ್ ಪಾಷ ಹೇಳಿದರು.
ಅವರು ನಗರದ ತಾಲೂಕು ಕಛೇರಿಯಲ್ಲಿ ಕಾಡುಗೊಲ್ಲ ಹಾಗೂ ಹಟ್ಟಿಗೊಲ್ಲ ಜಾತಿ ಪ್ರಮಾಣ ಪತ್ರ ನಿಡುವ ಕುರಿತು ಆಯೋಜಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ಕಾಡುಗೊಲ್ಲ ಹಾಗೂ ಹಟ್ಟಿಗೊಲ್ಲ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡುವಂತೆ ನಿಮ್ಮ ಮನವಿಯನ್ನು ಸ್ವೀಕರಿಸಲಾಗಿದೆ ಅದೇ ರೀತಿಯಲ್ಲಿ ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಇನ್ನೂ ಕಾಡುಗೊಲ್ಲ ಸಮುದಾಯದ ತಾಲೂಕು ಅಧ್ಯಕ್ಷ ಬೂದಿಹಳ್ಳಿ ರಾಜಣ್ಣ ಮಾತನಾಡಿ, ಹಲವು ವರ್ಷಗಳಿಂದ ಕಾಡುಗೊಲ್ಲ ಸಮುದಾಯ ಪ್ರತಿಭಟನೆಗಳನ್ನು ಮಾಡುತ್ತ ನಮ್ಮ ಹಕ್ಕು ನಮಗೆ ನೀಡುವಂತೆ ಒತ್ತಾಯ ಮಾಡುತ್ತಿದ್ದೆವೆ ಆದರಂತೆ ಈಗಾಗಲೇ ರಾಜ್ಯದಲ್ಲಿ ಹಲವು ತಾಲೂಕುಗಳಲ್ಲಿ ಕಾಡುಗೊಲ್ಲ ಸಮುದಾಯದ ಜಾತಿ ಪ್ರಮಾಣ ಪತ್ರ ನೀಡಲಾಗಿದೆ ಆದರೆ ನಮ್ಮ ತಾಲೂಕಿನಲ್ಲಿ ಮಾತ್ರ ನೀಡುತ್ತಿಲ್ಲ, ಇದರಿಂದ ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ನಮ್ಮ ಸಮುದಾಯ ಭದ್ರತೆ ಇಲ್ಲದಾಗಿದೆ ಹಿನ್ನಡೆಯಾಗಿದೆ ಮಕ್ಕಳ ವಿದ್ಯಾಬ್ಯಾಸಕ್ಕೂ ಜಾತಿ ಪ್ರಮಾಣ ಪತ್ರ ಇಲ್ಲವಾಗಿದೆ ಆದ್ದರಿಂದ ದಯಾಮಾಡಿ ನಮ್ಮ ಕಾಡು ಗೊಲ್ಲ ಹಾಗೂ ಹಟ್ಟಿ ಗೊಲ್ಲ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ಸಿಂದುತ್ವ ನೀಡಬೇಕೆಂದು ಮನವಿ ಮಾಡಿದರು.
ಇದೇ ಸಂಧರ್ಭದಲ್ಲಿ ಕಾಡುಗೊಲ್ಲರ ಸಂಘದ ತಾಲೂಕು ಅಧ್ಯಕ್ಷ ಬೂದಿಹಳ್ಳಿ ರಾಜಣ್ಣ, ಉಪಾಧ್ಯಕ್ಷ ಶಿವಮೂರ್ತಿ, ವೀರೇಶ್, ಮಹಾಲಿಂಗಪ್ಪ, ಕೃಷ್ಣಮೂರ್ತಿ, ಉಮೇಶ್ ಮಾಳಿಗೆ, ನಿರ್ಸಗ ಗೊಂವಿದ್‌ರಾಜ್, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಮಂಜುನಾಥ್, ಬಿಸಿಎಂ ಅಧಿಕಾರಿ ದಿವಕಾರ್, ಶಿರಸ್ತೆದಾರ್ ಗಿರೀಶ್, ಶಿವರಾಜ್, ಸದಾಶಿವಪ್ಪ, ಶ್ರೀನಿವಾಸ್ ಇತರರು ಪಾಲ್ಗೊದ್ದರು.

About The Author

Namma Challakere Local News
error: Content is protected !!