ಚಳ್ಳಕೆರೆ : ಶ್ರೀಮತಿ ಇಂದಿರಾ ಗಾಂಧಿ ಅವರು ಸ್ವಾತಂತ್ರ‍್ಯ ಹೋರಾಟದಲ್ಲಿ ಸಕ್ರಿಯವಾಗಿ ತೊಡಗಿ, ಅಸಹಕಾರ ಚಳುವಳಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸಹಕಾರ ನೀಡಲು 1930ರಲ್ಲಿ ಅವರು ‘ಬಾಲ ಚರಕ ಸಂಘ’ವನ್ನು ಮತ್ತು ಮಕ್ಕಳ ‘ವಾನರ ಸೇನೆ’ಯನ್ನು ಸ್ಥಾಪಿಸಿದ್ದರು ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ವೀರಭದ್ರಪ್ಪ ಹೇಳಿದ್ದಾರೆ.
ಚಳ್ಳಕೆರೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಇಂದಿರಾ ಗಾಂಧಿ ಪುಣ್ಯ ಸ್ಮರಣೆಯಲ್ಲಿ ಭಾವಚಿತ್ರಕ್ಕೆ ಪುರ್ಷ್ಪಾಚನೆ ಮಾಡುವುದರ ಮೂಲಕ ಮಾತನಾಡಿದರು. ಮಹಾತ್ಮಾ ಗಾಂಧಿ ಅವರ ನೇತೃತ್ವದಲ್ಲಿ ಇಂದಿರಾ ಅವರು ದೆಹಲಿಯ ಕೋಮುಗಲಭೆ ಪೀಡಿತ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸಿದ್ದು, ಪ್ರಜಾಪ್ರಭುತ್ವದ ದೊಡ್ಡ ರಾಷ್ಟç ಭಾರತದಲ್ಲಿ ಮೊದಲ ಮಹಿಳಾ ಪ್ರಧಾನಿಯಾಗಿ ಮೂರು ಅವಧಿಗೆ ಅಧಿಕಾರ ನಡೆಸಿದ ಇಂದಿರಾಗಾAಧಿಗೆ ಸಲ್ಲುತ್ತದೆ ಎಂದರು.
ಇನ್ನೂ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಗೀತಬಾಯಿ ಮಾತನಾಡಿ, ಮೈಸೂರಿಗೆ ಕರ್ನಾಟಕ ಎಂದು ನಾಮಕರಣ ಮಾಡಿದ್ದು ಕಾಂಗ್ರೇಸ್‌ನ ಡಿ.ದೇವರಾಜ್ ಅರಸು ಕನ್ನಡ ರಾಜ್ರೋತ್ಸವನ್ನು ನಾವುಗಳ ಹೆಚ್ಚು ವಿಜೃಂಭಣಿಯಿAದ ಆಚರಸಿಬೇಕು, ಬಡವರಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದ ಇಂದಿರಾ ಗಾಂಧಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದನ್ನು ಇಂದಿನ ಯುವ ಪೀಳಿಗೆಗೆ ಸ್ಮರಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಭದ್ರಪ್ಪ, ಪರುಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ.ಶಶಿಧರ್, ನಗರಸಭಾ ಸದಸ್ಯ ಎಂ.ಜೆ.ರಾಘವೇAದ್ರ, ಮಾಜಿ ನಗರಸಭಾ ಸದಸ್ಯರಾದ ಚೇತನ್ ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಬಾಯಿ, ಸರಸ್ಪತಿ ಮತ್ತು ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು

About The Author

Namma Challakere Local News
error: Content is protected !!