ಚಳ್ಳಕೆರೆ ತಾಲ್ಲೂಕಿನ ಜಾಜೂರು ಗ್ರಾಮದಲ್ಲಿ ನಡೆದ ಗ್ರಾಮ ಪಂಚಾಯಿತಿ ಮಟ್ಟದ ಜನ ಸಂಪರ್ಕ ಸಭೆಯಲ್ಲಿ ಸ್ಥಳೀಯ ಶಾಸಕ ಟಿ.ರಘುಮೂರ್ತಿ
ಪಾಲ್ಗೊಂಡು ಮಾತನಾಡಿದರು.
ತಾಲ್ಲೂಕು ಆಡಳಿತ ಮತ್ತು ಗ್ರಾಮ ಪಂಚಾಯಿತಿ ವತಿಯಿಂದ ಜಾಜೂರು ಗ್ರಾಮದಲ್ಲಿ ನಡೆದ ಗ್ರಾಮ ಪಂಚಾಯಿತಿ ಮಟ್ಟದ ಜನ ಸಂಪರ್ಕ ಸಭೆಯಲ್ಲಿ ಪಾಲ್ಗೊಂಡು ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಆಲಿಸಿ ಪರಿಹಾರ ಕಲ್ಪಿಸುವಂತೆ ಸಂಭಂದಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿಗಳಾದ ರೇಹಾನ್ ಪಾಷಾ, ಕಾರ್ಯನಿರ್ವಾಹಕ ಅಧಿಕಾರಿಗಳಾದ ಶಶಿಧರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಹರಿಪ್ರಸಾದ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲೋಕಮ್ಮ ಸುರೇಶ್, ಉಪಾಧ್ಯಕ್ಷರಾದ ಪ್ರೇಮಕ್ಕೆ ಹನುಮಂತರಾಯ, ಸದಸ್ಯರುಗಳಾದ ರಂಜನ್, ನರಸಿಂಹಪ್ಪ, ಹೇಮಂತ್ ಕುಮಾರ್ , ರಂಗನಾಥ, ಮುಖಂಡರಾದ ನಾಗರಾಜ್, ವೆಂಕಟೇಶ್, ಮಂಜುನಾಥ, ರಂಗನಾಥ, ರಂಗಪ್ಪ , ಚಲಿಮೇಶ್, ಸುರೇಶ್, ಮಹೇಶ್, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.