ಚಳ್ಳಕೆರೆ: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕಲ್ಲಿನ ಕೋಟೆಗೆ ಆಕಾಂಕ್ಷಿಗಳ ಪಟ್ಟಿ ಕಾಂಗ್ರೇಸ್ ನಲ್ಲಿ ಅರ್ಧ ಡಜನ್‌ಗಿಂತೆ ಹೆಚ್ಚಾಗಿದೆ.
ಹೌದು ಅದರಂತೆ ಇಂದು ಕಾಂಗ್ರೆಸ್ ಮುಖಂಡ ಹಾಗೂ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಸುನಿಲ್ ಕುಮಾರ್ ಕ್ಷೇತ್ರಕ್ಕೆ ಆಗಮಿಸಿ ಮಾಧ್ಯಮದೊಂದಿಗೆ ಮಾತನಾಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಚಿತ್ರದುರ್ಗದಲ್ಲಿ ಕಳೆದ ಹಲವು ವರ್ಷಗಳಿಂದ ಒಡನಾಟ ನನಗಿದೆ ಆದ್ದರಿಂದ ಪಕ್ಷದ ವರಿಷ್ಟರು ನನಗೆ ಟಿಕೆಟ್ ನೀಡಿದರೆ ಖಂಡಿತ ಗೆಲುವು ಸಾಧಿಸುತ್ತೆನೆ, ಚಿತ್ರದುರ್ಗ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಸ್ಪಂಧಿಸುತ್ತೆನೆ, ಕ್ಷೇತ್ರದಲ್ಲಿ ನನ್ನ ಮೊದಲ ಆಧ್ಯತೆ ಚಿತ್ರದುರ್ಗದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ನನ್ನ ಗುರಿಯಾಗಿದೆ ಎಂದರು.
ಈ ಬಾರಿ 2024ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ನಿಂದ ಟಿಕೆಟ್ ಬಯಸಿದ್ದು ಪಕ್ಷದ ರಾಷ್ಟ್ರೀಯ ವರಿಷ್ಠರಾದ ರಾಹುಲ್ ಗಾಂಧಿ ರಾಜ್ಯ ನಾಯಕರ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರ ಬಳಿ ಈಗಾಗಲೇ ಮಾತುಕತೆ ನಡೆದಿದ್ದು ಸಕಾರಾತ್ಮಕ ಸ್ಪಂದನೆ ದೊರೆತಿದೆ ಹೀಗಾಗಿ ಪಕ್ಷ ಟಿಕೆಟ್ ನೀಡಿದಲ್ಲಿ ಪಕ್ಷದ ಹಿರಿಯ ಕಿರಿಯ ಸೇರಿದಂತೆ ಎಲ್ಲ ನಾಯಕರ ಕಾರ್ಯಕರ್ತರ ಬೆಂಬಲ ಪಡೆದು ಗೆಲುವು ಸಾಧಿಸಿ ಜಿಲ್ಲೆಯ ಯುವಕರಿಗೆ ಉದ್ಯೋಗ ಸೃಷ್ಟಿ ಮೆಡಿಕಲ್ ಕಾಲೇಜ್ ಸ್ಥಾಪನೆ ಸೇರಿದಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಬೇಕಾದ ಕೇಂದ್ರದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಚಿತ್ರದುರ್ಗ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.