ಚಳ್ಳಕೆರೆ : ನಗರ ಸ್ಥಳೀಯ ಸಂಸ್ಥೆಗಳ ವಾಹನ ಚಾಲಕರು ನೀರು ಸರಬರಾಜು ಸಹಾಯಕರು ಲೋಡರ್ , ಕ್ಲೀನರ್ , ಯುಜಿಡಿ ಕಾರ್ಮಿಕರು ಸೇರಿದಂತೆ ಎಲ್ಲಾ ಬಗೆಯನ್ನು ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೆ ತರುವಂತೆ ಆಗ್ರಹಿಸಿ ಇದೇ ಡಿಸೆಂಬರ್ 13ರಂದು ಬೆಳಗಾವಿಯ ಸುವರ್ಣಸೌಧದ ಎದುರು ರಾಜ್ಯಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ನಗರಸಭೆ ಹೊರಗುತ್ತಿಗೆ ನೌಕರರ ಸಂಘದ ತಾಲೂಕು ಅಧ್ಯಕ್ಷ ಶ್ರೀನಿವಾಸ್ ಹೇಳಿದ್ದಾರೆ.
ಅವರು ನಗರದ ನಗರಸಭೆ ಪೌರಾಯುಕ್ತರ ಕಚೇರಿಯಲ್ಲಿ ಪೌರಾಯುಕ್ತ ಸಿ.ಚಂದ್ರಪ್ಪ ರವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದರು.
ಹೊರಗುತ್ತಿಗೆ ನೌಕರರ ನ್ಯಾಯಯುತ ಹೋರಾಟಕ್ಕೆ ಅಗತ್ಯ ಸಹಕಾರ ನೀಡುವಂತೆ ನಗರಸಭೆ ಪೌರಾಯುಕ್ತರನ್ನು ಕೋರಿದರು.
ಇದೇ ಸಂದರ್ಭದಲ್ಲಿ ಉಪಾಧ್ಯಕ್ಷ ಪೆನ್ನೇಶ್, ಕಾರ್ಯದರ್ಶಿ ಮಂಜುನಾಥ್ , ಮಂಜುನಾಥ, ದಿವಾಕರ್, ಬಸವರಾಜ್, ಪಾಪೇಶ್ , ರಫಿ, ಅಶೋಕ್ , ಕುಮಾರ್, ನಾಗರಾಜ್, ಪ್ರಭು, ತಿಪ್ಪೇಸ್ವಾಮಿ, ಮಂಜು, ಇತರರು ಹಾಜರಿದ್ದರು