ಪಟ್ಟಣದಲ್ಲಿ ಅಂಗಡಿಗಳಲ್ಲಿ ಅನ್ಯ ಭಾಷೆಯ ನಾಮಫಲಕಗಳು ರಾರಾಜಿಸುತ್ತವೆ ಕೂಡಲೇ ಪಟ್ಟಣ ಪಂಚಾಯತಿ ಅಧಿಕಾರಿಗಳು ತೆರವುಗೊಳಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ವತಿಯಿಂದ ಮನವಿಯನ್ನ ನೀಡಲಾಯಿತು.

ನಾಯಕನಹಟ್ಟಿ:: ಪಟ್ಟಣ ಮತ್ತು ಹೋಬಳಿಯ ಸಾರ್ವಜನಿಕರು ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ನಾಯಕನಹಟ್ಟಿ ಹೋಬಳಿ ಘಟಕ ಅಧ್ಯಕ್ಷ ಪಿ ಮುತ್ತಯ್ಯ ಮನವಿಯನ್ನ ಮಾಡಿದ್ದಾರೆ.
ಬುಧವಾರ ಅವರು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣ ವತಿಯಿಂದ ಪಟ್ಟಣದ ಅಂಗಡಿ ಮುಂಗಟ್ಟುಗಳ ನಾಮಫಲಕಗಳು ಅನ್ಯ ಭಾಷೆಗಳಿಂದ ರಾರಾಜಿಸುತ್ತವೆ ಕೊಡಲೇ ಪಟ್ಟಣ ಪಂಚಾಯತಿಯ ಅಧಿಕಾರಿಗಳು ತೆರವುಗೊಳಿಸಿ, ಕನ್ನಡ ನಾಮಫಲಕಗಳನ್ನು ಆಗುವಂತೆ ಅಂಗಡಿ ಮಾಲೀಕರಿಗೆ ತಿಳಿಸಬೇಕು ಮತ್ತು ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿಯನ್ನ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಸಿದ ಪಟ್ಟಣ ಪಂಚಾಯತಿ ಮುಖ್ಯಧಿಕಾರಿ ಎಂ ಶಿವಕುಮಾರ್ ಮಾತನಾಡಿ ನಾಳೆಯಿಂದ ನಮ್ಮ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರಕಟಣೆಯ ಮೂಲಕ ಸಾರ್ವಜನಿಕರಿಗೆ ಮತ್ತು ಅಂಗಡಿ ಮಾಲೀಕರಿಗೆ ಜಾಗೃತಿ ಮೂಡಿಸಲಾಗುವುದು ಎಂದು ಪ್ರತಿಕ್ರಿಸಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಹೋಬಳಿ ಘಟಕ ಅಧ್ಯಕ್ಷ ಪಿ ಮುತ್ತಯ್ಯ ಜಾಗನೂರಹಟ್ಟಿ, ನಗರ ಘಟಕ ಅಧ್ಯಕ್ಷ ಓ ತಿಪ್ಪೇಸ್ವಾಮಿ, ಗೌರವಾಧ್ಯಕ್ಷ ವಿಶ್ವನಾಥ್, ನಗರ ಘಟಕ ಉಪಾಧ್ಯಕ್ಷ ಸಿ ಎಸ್ ರಾಘವೇಂದ್ರ, ಹೋಬಳಿ ಘಟಕ ಮಾಜಿ ಅಧ್ಯಕ್ಷ ಬಿ. ತಿಪ್ಪೇಸ್ವಾಮಿ ಮಾದಯ್ಯನಹಟ್ಟಿ, ಪ್ರಧಾನ ಕಾರ್ಯದರ್ಶಿ ಕಾಟಯ್ಯ, ಯುವ ಘಟಕ ಅಧ್ಯಕ್ಷ ಸುರೇಶ್, ಹೋಬಳಿ ಘಟಕ ಉಪಾಧ್ಯಕ್ಷರಾದ ಈ. ಮಧು, ಮಂಜುನಾಥ್, ಕಾರ್ಮಿಕ ಘಟಕ ಅಧ್ಯಕ್ಷ ನಾಗರಾಜ್, ಚೌಳಕೆರೆ ಡಿ ಬಿ ಕರಿಬಸಪ್ಪ, ಕೆ ಬಿ ನಗರ ಬೋರಣ್ಣ, ಸೇರಿದಂತೆ ಇದ್ದರು

Namma Challakere Local News
error: Content is protected !!