ಬೆಳಗಾವಿ ಸುವರ್ಣಸೌಧ : ಬಯಲು ಸೀಮೆಯಲ್ಲಿ ತಮ್ಮ ಬೆಳೆಗಳಿಗೆ ರೈತರು ಕಟ್ಟಿದ ಬೆಳೆ ವಿಮೆಯ ಅವ್ಯವಾಹರ ಕುರಿತು ಸದನದಲ್ಲಿ ಧ್ವನಿ ಎತ್ತಿದ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಇಂದು ರೈತರಿಗೆ ಬೆಳೆವಿಮೆ ಒದಗಿಸುವ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲು ನಿರ್ಧಾರ ಕೈಗೊಳ್ಳಲಾಯಿತು.
ರೈತರ ಹಿತ ಸಂರಕ್ಷಣೆ ಉದ್ದೇಶದಿಂದ ಬೆಳಗಾವಿಯ ಸುವರ್ಣಸೌಧದ ಸಭಾಂಗಣದ ಕೊಠಡಿಯಲ್ಲಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಭಾಗವಹಿಸಿ ಮಾತನಾಡಿದರು.
ಮಹತ್ವದ ಸಭೆಯಲ್ಲಿ ಬರ ನಿರ್ವಹಣೆ, ಬರದಿಂದ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪರಿಹಾರ ವಿತರಿಸುವುದು, ಬೆಳೆ ವಿಮೆಗಳ ಸಾಧಕ ಬಾಧಕಗಳ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲು ತೀರ್ಮಾನಿಸಲಾಗಿದೆ.
ಇನ್ನೂ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಸತತ ಬರಗಾಲಕ್ಕೆ ತುತ್ತಾದ ಚಳ್ಳಕೆರೆ ಮೊಳಕಾಲ್ಮೂರು ಚಿತ್ರದುರ್ಗ ಸೇರಿದಂತೆ ಜಿಲ್ಲೆಯ ತಾಲೂಕುಗಳಲ್ಲಿ ಈ ಬಾರಿ ಭೀಕರ ಬರಗಾಲ ಆವರಿಸಿದ್ದು ರೈತಾಪಿ ವರ್ಗ ಸಂಕಷ್ಟಕ್ಕೆ ಸಿಲುಕಿದ್ದಾರೆ, ಶೀಘ್ರವಾಗಿ ಗೋಶಾಲೆಗಳನ್ನು ತೆರೆದು ಗೋವುಗಳಿಗೆ ಮೇವು ವಿತರಣೆ ಮಾಡುವುದು ಹಾಗೂ ಚಳ್ಳಕೆರೆ ಬುಡಕಟ್ಟು ದೇವರ ಗೋವುಗಳ ದೇವರ ಹಸುಗಳಿಗೆ ಮೇವು ವಿತರಣೆ ಮಾಡುವುದು ಹಾಗೂ ಶಾಶ್ವತವಾಗಿ ದೇವರ ಗೋವುಗಳಿಗೆ ಗೋಶಾಲೆ ತೆರೆಯುವುದು ಬರಗಾಲದಿಂದ ಬೆಳೆ ಕಳೆದುಕೊಂಡ ರೈತರಿಗೆ ಬೆಳೆ ಪರಿಹಾರ ಬೆಳೆ ವಿಮೆಗಳ ಮಂಜೂರಾತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಕೃಷಿ ಸಚಿವರ ಗಮನ ಸೆಳೆದರು.

ಈದೇ ಸಂದರ್ಭದಲ್ಲಿ ಸಚಿವರಾದ ಈಶ್ವರ್ ಖಂಡ್ರೆ, ಶರಣಪ್ರಕಾಶ್ ಪಾಟೀಲ್, ಪ್ರೀಯಾಂಕ್ ಖರ್ಗೆ, ಶರಣಬಸಪ್ಪಗೌಡ ದರ್ಶನ್ ಪೂರ್, ಹಾಗೂ ಶಾಸಕರಾದ ಕೊನಾರೆಡ್ಡಿ, ದರ್ಶನ ಪುಟ್ಟಣ್ಣಯ್ಯ ಮತ್ತಿತರರು ಉಪಸ್ಥಿತರಿದ್ದರು.

Namma Challakere Local News
error: Content is protected !!