ಚಳ್ಳಕೆರೆ : ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ಕೋಟ್ಪಾ-2003ರ ಕಾಯ್ದೆಯ ಕುರಿತು ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಚಳ್ಳಕೆರೆ ತಾಲ್ಲೂಕಿನ ನಗರ ಪ್ರದೇಶಗಳಲ್ಲಿ ಜಿಲ್ಲಾ ಮಟ್ಟದ ತಂಬಾಕು ತನಿಖಾ ತಂಡವು ತಂಬಾಕು ಉತ್ಪನ್ನಗಳ ಮಾರಾಟಗಾರರ ಅಂಗಡಿಗಳಿಗೆ ದಾಳಿ ಮಾಡಿ ಸಾರ್ವಜನಿಕರಲ್ಲಿ ಮತ್ತು ಅಂಗಡಿ ಮಾಲೀಕರಿಗೆ ಜಾಗೃತಿ ಮೂಡಿಸಲಾಯಿತು. ಇನ್ನೂ ಸಾರ್ವಜನಿಕ ಪ್ರದೇಶಗಳಲ್ಲಿ ಉಲ್ಲಂಘನೆ ಸಂಬAಧಿಸಿದAತೆ ದಂತೆ ಒಟ್ಟು 41 ಪ್ರಕರಣಗಳನ್ನು ದಾಖಲಿಸಿದ್ದು, 4100 ರೂ. ದಂಡ ವಿಧಿಸಲಾಗಿದೆ.
ಇನ್ನೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ್ ಮಾತನಾಡಿ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡದಂತೆ, ಪಾನ್ ಮಸಾಲ, ತಂಬಾಕು ಜಗಿದು ಎಲ್ಲೆಂದರಲ್ಲಿ ಉಗಿಯದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ತಂಬಾಕು ನಿಯಂತ್ರಣ ಕಾಯ್ದೆ ಪಾಲಿಸುವಂತೆ ಅಂಗಡಿಗಳ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ ಎಂದರು.
ತAಬಾಕು ದಾಳಿಯಲ್ಲಿ ಜಿಲ್ಲಾ ಮಟ್ಟದ ತನಿಖಾ ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಬಿ.ಎಂ. ಪ್ರಭುದೇವ್, ಚಳ್ಳಕೆರೆ ತಾಲ್ಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ತಿಪ್ಪೇಸ್ವಾಮಿ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಅಮೃತರಾಜ್ ಮತ್ತು ರಾಜು ಬಿ.ಹೆಚ್, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ವರುಣ್ ಟಿ, ಪೊಲೀಸ್ ಕಾನ್ಸ್ಟೇಬಲ್ ಮಂಜುನಾಥ, ಭಾಗವಹಿಸಿದ್ದರು