ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಟಿ ರಘುಮೂರ್ತಿ ರವರು ಚಿತ್ರದುರ್ಗ ನಗರಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಹೆಚ್.ಸಿ. ಮಹದೇವಪ್ಪ ರವರನ್ನು ಸನ್ಮಾನಿಸಿ ಗೌರವಿಸಿದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾ ಪೂರ್ವ ಭಾವಿ ಸಭೆಗೆ ಆಗಮಿಸಿದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವೀಕ್ಷಕರ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಹೆಚ್.ಸಿ. ಮಹದೇವಪ್ಪ ರವರನ್ನು ಸನ್ಮಾನಿಸಿ ಗೌರವಿಸಲಾಯಿತು ಹಾಗೂ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಡಿ ಸುಧಾಕರ ರವರು, ಶಾಸಕರಾದ ಶ್ರೀ ಬಿ.ಜಿ ಗೋವಿಂದಪ್ಪ ರವರು, ಮಾಜಿ ಸಚಿವರಾದ ಶ್ರೀ ಹೆಚ್.ಆಂಜನೇಯ ರವರು, ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಶ್ರೀ ಡಿ.ಟಿ.ಶ್ರೀನಿವಾಸ್ ರವರು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಸುರೇಶ್ ಬಾಬು ರವರು, ಅಸಂಘಟಿತ ಕಾರ್ಮಿಕರ ರಾಜ್ಯಾಧ್ಯಕ್ಷರಾದ ಶ್ರೀ ಮಂಜುನಾಥ ರವರು, ಲೋಕಸಭಾ ಕ್ಷೇತ್ರದ ಟಿಕೇಟ್ ಆಕಾಂಕ್ಷಿಗಳು, ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.