ಚಿತ್ರದುರ್ಗ : ಪದವಿ ನಂತರ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ತಮ್ಮ ಭವಿಷ್ಯವನ್ನು ರೂಪಿಸಿಕೊಂಡು ಸಮಾಜದ ಋಣ ತೀರಿಸುವ ಜವಾಬ್ದಾರಿ ವಿದ್ಯಾರ್ಥಿ ಸಮೂಹದ ಮೇಲಿದೆ ಎಂದು ಶ್ರೀ ಮುರುಘಾಮಠದ ಉಸ್ತುವಾರಿಗಳಾದ ಶ್ರೀ ಬಸವಪ್ರಭು ಸ್ವಾಮಿಗಳು ಹೇಳಿದರು.
ನಗರದ ಚಂದ್ರವಳ್ಳಿಯ ಎಸ್.ಜೆ.ಎಂ. ಕಾಲೇಜಿನ ರಾಜ್ಯಶಾಸ್ತç ಮತ್ತು ಐ.ಕ್ಯೂ.ಎ.ಸಿ. ವಿಭಾಗದ ಸಹಯೋಗದಲ್ಲಿ ಕಳೆದ ಒಂದು ತಿಂಗಳಿನಿAದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕರ್ನಾಟಕ ಗ್ರಾಮ ಸ್ವರಾಜ್ಯ ವಿಷಯ ಕುರಿತ ಸರ್ಟಿಫಿಕೇಟ್ ಕೋರ್ಸ್ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭದ ಸಾನ್ನಿಧ್ಯ ವಹಿಸಿ ಶ್ರೀಗಳು ಮಾತನಾಡುತ್ತ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ದಿನಗಳಲ್ಲಿ ನಿರಂತರ ಶ್ರದ್ಧೆ, ಪರಿಶ್ರಮದ ಮೂಲಕ ವಿದ್ಯಾರ್ಥಿ ಜೀವನವನ್ನು ಬಂಗಾರವಾಗಿಸಿಕೊAಡು ಉಜ್ವಲ ಜೀವನವನ್ನು ರೂಪಿಸಿಕೊಳ್ಳುವಂತೆ ಕರೆ ನೀಡಿದರು.
ಮುಂದಿನ ದಿನಗಳಲ್ಲಿ ಮಹಾವಿದ್ಯಾಲಯವು ವಿದ್ಯಾರ್ಥಿಗಳು ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಪೂರಕವಾದ ಇಂತಹ ಕೋರ್ಸ್ಗಳನ್ನು ನಡೆಸುವ ಮೂಲಕ ಗುಣಾತ್ಮಕ ಶಿಕ್ಷಣವನ್ನು ನೀಡುವ ಕಾರ್ಯಗಳಿಗೆ ಶ್ರೀಮಠದಿಂದ ತಕ್ಕ ಸಹಕಾರ ನೀಡಲಾಗುವುದೆಂದು ಹೇಳಿದರು.
ಮುಖ್ಯಅತಿಥಿ ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜಿನ ಸ್ನಾತಕೋತ್ತರ ವಿಭಾಗದ ಪ್ರಾಧ್ಯಾಪಕ ಡಾ. ಪಿ.ಎಸ್. ಗಂಗಾಧರ್ ಮಾತನಾಡಿ, ಇಡೀ ಭಾರತದ ಆಡಳಿತ ವ್ಯವಸ್ಥೆಯಲ್ಲಿ ಗ್ರಾಮಭಾರತ ಮತ್ತು ನಗರಭಾರತ ಆಡಳಿತ ವ್ಯವಸ್ಥೆಗಳಿದ್ದು, ಗ್ರಾಮೀಣ ಭಾರತದ ಸರ್ವತೋಮುಖ ಬೆಳವಣಿಗೆಯಾದಾಗ ಮಾತ್ರ ದೇಶವು ಸಮಗ್ರ ಅಭಿವೃದ್ಧಿ ಹೊಂದಲು ಸಾಧ್ಯ. 1992ರಲ್ಲಿ ಭಾರತ ಸಂವಿಧಾನಕ್ಕೆ 73ನೇ ತಿದ್ದುಪಡಿಯ ಮೂಲಕ ಗ್ರಾಮೀಣ ಭಾರತದ ಆಡಳಿತವನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಮಹತ್ವಪೂರ್ಣ ಹೆಜ್ಜೆ ಇಡಲಾಯಿತು. ತನ್ಮೂಲಕ ಈ ಹಿಂದೆ ಕೆಲವೇ ವ್ಯಕ್ತಿಗಳ ನಿಯಂತ್ರಣದಲ್ಲಿದ್ದ ಆಡಳಿತ ಸೂತ್ರವು ಶ್ರೀಸಾಮಾನ್ಯನಿಗೂ ತಲುಪುವಂತಾಯಿತು. ಅಲ್ಲದೇ ಗ್ರಾಮೀಣ ಮಟ್ಟದಲ್ಲಿ ಸ್ತಿçÃಯರಿಗೆ ಸಮಾನ ಅವಕಾಶಗಳು ದೊರೆಯುವಂತಾದುದು ಇದರ ಸಾಧನೆಯಾಗಿದೆ. ಒಂದು ವಿಶ್ವವಿದ್ಯಾಲಯದ ಮಟ್ಟದಲ್ಲಿ ಆರ್ಥಿಕ ಸಹಕಾರದೊಂದಿಗೆ ಆಯೋಜಿಸಬಹುದಾದ ಇಂತಹ ಕಾರ್ಯಕ್ರಮವನ್ನು ಯಾವುದೇ ಹಣಕಾಸಿನ ನೆರವು ಇಲ್ಲದೆ ಕಾಲೇಜು ಮಟ್ಟದಲ್ಲಿ ಆಯೋಜಿಸಿರುವುದು ತುಂಬ ಶ್ಲಾಘನೀಯ. ಇದರ ಫಲಾನುಭವಿಗಳಾದ ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯರಾದ ಡಾ. ಎಸ್.ಹೆಚ್. ಪಂಚಾಕ್ಷರಿ, ಗ್ರಾಮೀಣ ಭಾರತವನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಕಾಲಕಾಲಕ್ಕೆ ತಿದ್ದುಪಡಿಯಾದ ವಿಧೇಯಕಗಳು ರಾಷ್ಟçದ ಸಮಗ್ರತೆ ಮತ್ತು ಆರ್ಥಿಕ ಅಭಿವೃದ್ಧಿಗೆ ಪೂರಕವಾದ ಸಂಗತಿಗಳಾಗಿವೆ. ಮುಂದಿನ ದಿನಮಾನಗಳಲ್ಲಿ ಇಂತಹ ಉಪಯುಕ್ತವಾದ ಕಾರ್ಯಕ್ರಮಗಳನ್ನು ಕಾಲೇಜಿನ ವತಿಯಿಂದ ಆಯೋಜಿಸಲಾಗುವುದೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಸರ್ಟಿಫಿಕೇಟ್ ಕೋರ್ಸ್ ಪೂರ್ಣಗೊಳಿಸಿದ 47 ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಐಕ್ಯೂಎಸಿ ಸಂಯೋಜಕರಾದ ಡಾ. ಹರ್ಷವರ್ಧನ್ ವೇದಿಕೆಯಲ್ಲಿದ್ದರು. ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರುಗಳಾದ ಪ್ರೊ.ಜಿ.ಎನ್. ಬಸವರಾಜಪ್ಪ, ಡಾ. ಬಿ. ರೇವಣ್ಣ, ಡಾ. ಸತೀಶ್ ನಾಯ್ಕ್, ಪ್ರೊ. ಹೆಚ್.ಎಂ. ಮಂಜುನಾಥಸ್ವಾಮಿ, ಪ್ರೊ. ಬಿ. ನಾಗರಾಜ್, ಪ್ರೊ. ಟಿ.ಎನ್. ರಜಪೂತ್, ಡಾ. ಎಸ್. ನಾಜಿರುನ್ನೀಸಾ, ಪ್ರೊ. ವಿ. ನಳಿನಿ, ಪ್ರೊ. ಎನ್. ಚಂದಮ್ಮ, ಪ್ರೊ. ಸಿ.ಎನ್. ವೆಂಕಟೇಶ್ ಹಾಗೂ ವಿದ್ಯಾರ್ಥಿಗಳು ಇದ್ದರು.
ತೃತೀಯ ಬಿ.ಎ. ವಿದ್ಯಾರ್ಥಿನಿಯರಾದ ಕು| ಸಹನಾ ಹಾಗು ಕು| ಪುಷ್ಪ ಪ್ರಾರ್ಥಿಸಿದರು. ರಾಜ್ಯಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ. ಆರ್.ಕೆ. ಕೇದಾರನಾಥ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗಸಿತಿಸಿದರು. ಕನ್ನಡ ವಿಭಾಗದ ಡಾ. ಬಿ. ರೇವಣ್ಣ ವಂದಿಸಿದರು. ತೃತೀಯ ಬಿ.ಎ. ವಿದ್ಯಾರ್ಥಿನಿ ಕು| ಲೀಲಾ ನಿರೂಪಿಸಿದರು.

Namma Challakere Local News
error: Content is protected !!