ಚಳ್ಳಕೆರೆ : ದೇಶಕ್ಕೆ ಕಾಂಗ್ರೆಸ್ ಪಕ್ಷ ಅಪಾರ ಕೊಡುಗೆ ನೀಡಿದೆ. ಸ್ವಾತಂತ್ರ‍್ಯ ಸಂಗ್ರಾಮದಿAದ ಹಿಡಿದು ರಾಜೀವಗಾಂಧಿ ಅವರವರೆಗೂ ದೇಶದ ಸಮಗ್ರ ವಿಕಾಸಕ್ಕಾಗಿ ಕಾಲಕ್ಕೆ ತಕ್ಕಂತೆ ಶ್ರಮಿಸಿದೆ ಎಂದು ಶಾಸಕ ಟಿ.ರಘುಮೂರ್ತಿ ಹೇಳಿದರು.
ನಗರದ ಕಾಂಗ್ರೆಸ್ ಕಛೇರಿ ಸಭಾಂಗಣದಲ್ಲಿ ನಡೆದ 138ನೆ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ಬಹುತೇಕ ಕಾಂಗ್ರೆಸ್ಸಿಗರು ದೇಶಕ್ಕಾಗಿ ಪ್ರಾಣ ಕೊಟ್ಟಿದ್ದಾರೆ. ಆಯಾ ಕಾಲಕ್ಕೆ ತಕ್ಕ ಬೇಡಿಕೆಯಂತೆ ಹೋರಾಟಗಳನ್ನು ಮಾಡಿ ರಾಜಕೀಯ ಮತ್ತು ಆರ್ಥಿಕ, ಸಾಮಾಜಿಕ ಬೆಳವಣಿಗೆಗೆ ಕೊಡುಗೆ ನೀಡಿದ್ದಾರೆ. ಇದು ಕೆಲವೇ ಜನರ ಪಕ್ಷವಲ್ಲ. ಇದೊಂದು ದೇಶದ ಜನರೇ ನಡೆಸುತ್ತಿರುವ ಪಕ್ಷವಾಗಿದೆ. ಆದರೂ, ಬಿಜೆಪಿ ಮತ್ತು ಸಂಘ ಪರಿವಾರದವರು ಕಾಂಗ್ರೆಸ್ ಏನು ಮಾಡಿದೆ, ಏನು ಮಾಡಿದೆ ಎಂದು ಪ್ರಶ್ನಿಸುತ್ತಾರೆ. ಇವರಿಗೆ ಕಾಂಗ್ರೆಸ್ ಕೊಡುಗೆ ಕಾಣುತ್ತಿಲ್ಲವೆ ಎಂದು ಪ್ರಶ್ನಿಸಿದರು.
ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ವೀರಭದ್ರಯ್ಯ ಮಾತನಾಡಿ, ಕಾಂಗ್ರೆಸ್ ಪಕ್ಷವೊಂದೇ ದೇಶದ ಬದ್ಧತೆ ಮತ್ತು ಸಮಗ್ರತೆಗಾಗಿ ಚಿಂತನೆ ಮಾಡಿ ಪಕ್ಷದ ನಾಯಕರು ಕೆಲಸ ಮಾಡಿದ್ದಾರೆ. ಬ್ರಿಟಿಷರಿಂದ ದೇಶವನ್ನು ಮುಕ್ತ ಮಾಡುವಾಗಲೂ ನಮ್ಮ ನಾಯಕರು ತಮ್ಮ ಜೀವವೇ ಬದಲಿದಾನ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ನಿರಂತರವಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ ಸಾಧಕರ ಹಿರಿಯ ಕಾಂಗ್ರೆಸ್ಸಿಗರು ಮಾತ್ರ ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೀರಭದ್ರಪ್ಪ, ಶಶಿಧರ, ಜಿಲ್ಲಾ ಕೆ.ಡಿ.ಪಿ. ಸದಸ್ಯ ರಂಗಸ್ವಾಮಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪ್ರಕಾಶ್‌ಮೂರ್ತಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಾಘವೇಂದ್ರ, ನಗರಸಭೆ ಸದಸ್ಯೆ ಸುಮಾ ಭರಮಯ್ಯ, ಕವಿತಾ ಬೋರಯ್ಯ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತಿಪ್ಪೇಸ್ವಾಮಿ, ಕಿರಣ್ ಶಂಕರ್, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯ ಗಿರಿಯಪ್ಪ, ಆಂಜನೇಯ, ಮುಖಂಡರುಗಳಾದ ಸೈಯದ್, ಅನ್ವರ್ ಮಾಸ್ಟರ್, ರಾಜಪ್ಪ, ನೇತಾಜಿ ಪ್ರಸನ್ನಕುಮಾರ್, ಶಿವಕುಮಾರ್, ರಾಜಣ್ಣ, ಖಾದರ್, ಯರಬಾಲಪ್ಪ, ಮಹಿಳಾ ಮುಖಂಡರಾದ ಸರಸ್ವತಮ್ಮ, ರಾಜಕ್ಕ, ಕವಿತಾ, ಸುಮಲತಾ, ರಾಜೇಶ್ವರಿ, ಭಾಗ್ಯಮ್ಮ, ಭಾಗ್ಯಲಕ್ಷ್ಮಿ,ಮಂಜುಳಾ, ಮುಖಂಡರು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು