ನಾಗೇಂದ್ರಪ್ಪ ಬಿ ಸಹಾಯಕ ಪ್ರಾಧ್ಯಾಪಕರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಳವಂಡಿ ತಾ.ಜಿ.ಕೊಪ್ಪಳ ಇವರು ಕನ್ನಡ ವಿಶ್ವವಿದ್ಯಾಲಯದ ಸಮಾಜ ವಿಜ್ಞಾನಗಳ ನಿಕಾಯದ ಅಭಿವೃದ್ಧಿ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಡಾ. ಹೆಚ್.ಡಿ. ಪ್ರಶಾಂತ್ ರವರ ಮಾರ್ಗದರ್ಶನದಲ್ಲಿ “ಸಾಮುದಾಯಿಕ ಸಾರ್ವಜನಿಕ ಸ್ವತ್ತು ಮತ್ತು ಅಭಿವೃದ್ಧಿ” ವಿಷಯದಲ್ಲಿ ಮಂಡಿಸಿದ ಮಹಾಪ್ರಬಂಧಕ್ಕೆ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್(PhD) ಪದವಿಯನ್ನು ನೀಡಿದೆ.
ಶ್ರೀ ನಾಗೇಂದ್ರಪ್ಪ ಬಿ ಇವರು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ಸೂರಮ್ಮನಹಳ್ಳಿ ಗ್ರಾಮದ ಬಸಣ್ಣ ಮತ್ತು ಓಬಮ್ಮ ದಂಪತಿಗಳ ಕಿರಿಯ ಮಗನಾಗಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಸ್ವಗ್ರಾಮ ಹಾಗೂ ಮುಷ್ಟಲಗುಮ್ಮಿ ಶ್ರೀ ವೀರಭದ್ರೇಶ್ವರ ಪ್ರೌಢಶಾಲೆಯಲ್ಲಿ, ನಂತರ ಪಿ.ಯು.ಸಿ.,ಟಿ.ಸಿ.ಎಚ್. ಪೂರ್ಣಗೊಳಿಸಿ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಂತರ ಪ್ರಾಥಮಿಕ ಶಾಲೆ ಶಿಕ್ಷಕರು ಮತ್ತು ಪ್ರೌಢಶಾಲೆಯ ಆಂಗ್ಲ ಶಿಕ್ಷಕರಾಗಿ ಅವಿಭಜಿತ ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಕಾಕುಬಾಳು ಹಾಗೂ ದೇವಸಮುದ್ರ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಿ 2017 ರಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಮಾಜಶಾಸ್ತ್ರ ವಿಷಯದ ಸಹಾಯಕ ಪ್ರಾಧ್ಯಾಪಕರಾಗಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿದ್ದಾರೆ. ಶ್ರೀಯುತರಿಗೆ ದಿನಾಂಕ 10/01/2024 ರಂದು ಕನ್ನಡ ವಿಶ್ವವಿದ್ಯಾಲಯದ 32 ನುಡಿಹಬ್ಬದಲ್ಲಿ ಕರ್ನಾಟಕ ರಾಜ್ಯದ ಘನವೆತ್ತ ರಾಜ್ಯಪಾಲರು ಹಾಗೂ ಉನ್ನತ ಶಿಕ್ಷಣ ಸಚಿವರು ಶ್ರೀ ನಾಗೇಂದ್ರಪ್ಪ ಇವರಿಗೆ ಡಾಕ್ಟರೇಟ್ ಪದವಿ ಪ್ರದಾನ ಮಾಡಲಿದ್ದಾರೆ. ನಾಗೇಂದ್ರಪ್ಪ ಇವರ ಈ ಸಾಧನೆಗೆ ಸೂರಮ್ಮನಹಳ್ಳಿ ಗ್ರಾಮದ ಬಂಧುಗಳು ಹಾಗೂ ಕಾಲೇಜಿನ ಪ್ರಾಂಶುಪಾಲರು, ಬೋಧಕ,ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

About The Author

Namma Challakere Local News

You missed

error: Content is protected !!