ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಶ್ರಿ ಶರಣ ಬಸವೇಶ್ವರ ಹಾಗೂ ಗ್ರಾಮ ದೇವತೆ ಶ್ರೀ ಚೌಡೇಶ್ವರಿ ದೇವಿಯ ಕಾರ್ತಿಕೋತ್ಸವದ ರಥೋತ್ಸವ ಅದ್ದೂರಿಯಾಗಿ ಜರುಗಿತು‌

ರಥೋತ್ಸವವು ಗ್ರಾಮದ ಪ್ರಮುಖ ಬೀದಿಗಳಲ್ಲಿ ಡೊಳ್ಳು ಕುಣಿತ, ವೀರಗಾಸೆ ನೃತ್ಯ,ತಮಟೆ ನಗಾರಿಗಳಿಂದ ಮೆರವಣಿಗೆ ಮೂಲಕ ಸಾಗಿ ಪಾದಗಟ್ಟೆ ತಲುಪಿತು,

ನೂರಾರು ಭಕ್ತರು ದೊಡ್ಡ ದೊಡ್ಡ ಹೂವಿನ ಹಾರಗಳನ್ನು ರಥೋತ್ಸವಕ್ಕೆ ಅರ್ಪಿಸಿ ಭಕ್ತಿ ಭಾವ ಮೆರೆದರು, ಸಾವಿರಾರು ಭಕ್ತರು ತೇರಿಗೆ ಹೂವು, ಹಣ್ಣು ,ಕಾಯಿ,ದವನ ಸಮರ್ಪಿಸುವುದರ ಮೂಲಕ ಈ ರಥೋತ್ಸವಕ್ಕೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಯುವಕ ಸಂಘದ ಎಲ್ಲ ಪದಾಧಿಕಾರಿಗಳು
ಹಟ್ಟಿಯ ಯಜಮಾನರು ಮತ್ತು ಮುಖಂಡರು, ಯುವಕ/ಯುವತಿಯರು, ಸರ್ಕಾರಿ ಹಾಗೂ ಖಾಸಗಿ ನೌಕರರು,ಹಿರಿಯ ಕಲಾವಿದರು ಮಹಿಳಾ ಸಂಘಗಳ ಪದಾಧಿಕಾರಿಗಳು, ಸರ್ವ ಸದಸ್ಯರು ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಕೋಡಿಹಳ್ಳಿ ಗ್ರಾಮದ ಸಮಸ್ತ ನಾಗರೀಕ ಬಂಧುಗಳು ಸ್ವಾಮಿಯ ಕೃಪೆಗೆ ಪಾತ್ರರಾದರು.

About The Author

Namma Challakere Local News
error: Content is protected !!