ಚಳ್ಳಕೆರೆ : ಜನವರಿ 26ರ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಚಳ್ಳಕೆರೆ ಸರಕಾರಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಅಕ್ಷಿತಾ ಅವರು ಆಯ್ಕೆಯಾಗಿದ್ದಾರೆ.
ಇನ್ನೂ ಜ.26 ಗಣರಾಜ್ಯೋತ್ಸವ ಪಥಸಂಚಲನಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳು ಜ.14ರಿಂದ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಜಿಕೆವಿಕೆ ಬೆಂಗಳೂರು, ಇಲ್ಲ ಪಥ ಸಂಚಲನ ಶಿಬಿರ ಆಯೋಜಿಸಲಾಗಿದೆ. ಅದರಂತೆ ರಾಜ್ಯದ ಸುಮಾರು 6 ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು ಶಿಬಿರಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಭಾಗವಿಸುವಂತೆ ಚಳ್ಳಕೆರೆ ಸರಕಾರಿ ಪಿಯು ಕಾಲೇಜಿನ ಪ್ರಾಶುಂಪಾಲರಿಗೆ ಸುತ್ತೋಲೆ ನೀಡಿದ್ದಾರೆ ಎನ್ನಲಾಗಿದೆ. ಒಟ್ಟಾರೆ ಬಯಲು ಸೀಮೆಯ ಚಳ್ಳಕೆರೆ ನಗರದ ವಿದ್ಯಾರ್ಥಿಗಳ ಈ ಸಾಧನೆಗೆ ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು ಸಂತಸದ ನುಡಿಗಳನ್ನು ಹಾಡಿದ್ದಾರೆ.