ನಾಯಕನಹಟ್ಟಿ:: ಕೇಂದ್ರ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಜನಪರ ಯೋಜನೆಯ ಜಾರಿಗೆ ತರುವ ಮೂಲಕ ಗ್ರಾಮೀಣ ಪ್ರದೇಶದ ರೈತರಿಗೆ ಕೃಷಿ ಕೂಲಿ ಕಾರ್ಮಿಕರಿಗೆ ಮಹಿಳೆಯರಿಗೆ ಸೇರಿದಂತೆ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ನಾಯಕನಹಟ್ಟಿ ಕೆನರಾ ಬ್ಯಾಂಕ್ ಮ್ಯಾನೇಜರ್ ರಾಮ ಮೋಹನ್ ಹೇಳಿದ್ದಾರೆ.
ಮಂಗಳವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಆವರಣದಲ್ಲಿ ವಿಕಾಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿ ಮಾತನಾಡಿ ಗ್ರಾಮೀಣ ಪ್ರದೇಶದ ಜನರಿಗೆ ಆರ್ಥಿಕವಾಗಿ ಸದೃಢರಾಗಲು ಕೇಂದ್ರ ಸರ್ಕಾರ ಉತ್ತಮವಾದ ಯೋಜನೆಯನ್ನು ಜಾರಿಗೆ ತಂದಿದೆ.
ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಪ್ರಧಾನ ಮಂತ್ರಿ ಸುರಕ್ಷಾ ಭೀಮಾ ಪ್ರಧಾನ ಮಂತ್ರಿ ಸ್ವ ನಿಧಿ. ಅಟಲ್ ಪೆನ್ಷನ್ ಮಿತ್ರವಾಗಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಸೌಲಭ್ಯ ಗ್ರಾಹಕರು ಶೇಕಡಾ ..
ಪಿ ಎಂ ಸ್ವ ನಿಧಿ ಯೋಜನೆ ಬೀದೀ ಬದಿ ವ್ಯಾಪಾರಿಗಳು . ಸಾಲ ಸೌಲಭ್ಯ ಪಡೆಯಲು ಸಾಧ್ಯ. ಆದ್ದರಿಂದ ಪ್ರತಿಯೊಬ್ಬ ಗ್ರಾಹಕರು ಯೋಜನೆಗಳ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕಿವಿಮಾತು ಹೇಳಿದರು
ಇದೇ ಸಂದರ್ಭದಲ್ಲಿ ಪಟ್ಟಣದ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಜಿ.ರಾಮ್ ಮೋಹನ್. ಕುದಾಪುರ ಕೆನರಾ ಬ್ಯಾಂಕ್ ವ್ಯವಸ್ಥಾಪಕ ಸಾಗರ್, ಬ್ಯಾಂಕಿನ ನಿವೃತ್ತ ವ್ಯವಸ್ಥಾಪಕ ಸಿದ್ದಲಿಂಗಪ್ಪ, ಆರ್ಥಿಕ ಸಮಾಲೋಚಿಕಿ ಸೌಮ್ಯ ಚಳ್ಳಕೆರೆ ,ನಲಗೇತನಹಟ್ಟಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶೇಷಾದ್ರಿ ನಾಯಕ್, ಪಟ್ಟಣ ಪಂಚಾಯತಿ ಸಮುದಾಯ ಸಂಘಟಕ ಅಧಿಕಾರಿ ನಾಗರತ್ನಮ್ಮ, ಸಮುದಾಯ ಸಂಪನ್ಮೂಲ ವ್ಯಕ್ತಿ ರೇಣುಕಮ್ಮ, ಮಂಗಳಮ್ಮ, ಆಶಾ ಕಾರ್ಯಕರ್ತೆಯರಾದ ಪಾರಿಜಾತ, ದ್ರಾಕ್ಷಾಯಿಣಿ, ಟಿ. ಲಕ್ಷ್ಮಿ ದೇವಿ, ಶಿವರುದ್ರಮ್ಮ ಪರಂ ಜ್ಯೋತಿ, ಆಶಾ, ಇದ್ದರು