ಚಳ್ಳಕೆರೆ : ಚಳ್ಳಕೆರೆ ತಾಲೂಕಿನ ಚೆನ್ನಮ್ಮನಗತಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಮಯಕ್ಕೆ ಸರಿಯಾಗಿ ರೋಗಿಗಳಿಗೆ ವೈದ್ಯಾಧಿಕಾರಿಗಳು ಸಿಗುವುದಿಲ್ಲ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ದಟ್ಟವಾಗಿ ಹಬ್ಬಿದೆ.
ಆಂದ್ರದ ಗಡಿಭಾಗವಾದ ಪರುಶುರಾಂಪುರ ಹೋಬಳಿಯ ಚನ್ನಮ್ಮನಾಗತಿಹಳ್ಳಿ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಿಸಿರುವುದು ಶ್ಲಾಘನೀಯ
ಆದರೆ ಸುಸಜ್ಜಿತ ಕಟ್ಟಡ ಹಾಗೂ ಮೂಲಭೂತ ಸೌಲಭ್ಯಗಳನ್ನು ಕೊಟ್ಟಿದ್ದರು ವೈದ್ಯರ ನಿರ್ಲಕ್ಷ್ಯದಿಂದ ರೋಗಿಗಳು ಚಳ್ಳಕೆರೆ ನಗರದತ್ತ ಪ್ರಯಾಣ ಬೆಳೆಸಬೇಕಾಗುತ್ತದೆ.
ಇದರಿಂದ ಅತಿ ತುರ್ತಾಗಿ ಚಿಕಿತ್ಸೆಗೆ ಒಳಪಡುವ ರೋಗಿಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದೆ, ಆದ್ದರಿಂದ ಸಮಯಕ್ಕೆ ಸರಿಯಾದ ವೈದಾಧಿಕಾರಿಗಳನ್ನು ನೇಮಿಸಬೇಕು ಎಂದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಇನ್ನು ಸಮಯಕ್ಕೆ ಸರಿಯಾಗಿ ವೈದ್ಯಾಧಿಕಾರಿಗಳು ಬಾರದೇ ಇರುವುದರಿಂದ ಆಸ್ಪತ್ರೆಯಲ್ಲಿ ಖಾಲಿ ಕುರ್ಚಿ ಹಾಗೂ ಆಸ್ವತ್ರೆಯ ಮುಂಬಾಗ ರೋಗಿಗಳ ಅಳಲನ್ನು ಸ್ಥಳೀಯ ನಿವಾಸಿಗಳು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿರುವುದು ಕಂಡು ಬಂದಿದೆ.
ಈ ಕುರಿತಂತೆ ಸ್ಥಳೀಯ ನಿವಾಸಿಯಾದ ಚಂದ್ರುರವರು ಮಾಧ್ಯಮದೊಂದಿಗೆ ಮಾತನಾಡಿ, ಗಡಿಭಾಗವಾದ ಪರುಶುರಾಂಪುರ ಹೋಬಳಿಯ ಚೆನ್ನಮ್ಮ ನಾಗತಿಹಳ್ಳಿ ಗ್ರಾಮಕ್ಕೆ ಸಾರ್ವಜನಿಕರ ಹಿತ ದೃಷ್ಟಿಯಿಂದ ಸ್ಥಳೀಯ ಶಾಸಕ ಟಿ ರಘು ಮೂರ್ತಿರವರು ಸುಸಜ್ಜಿತವಾದ ಆಸ್ಪತ್ರೆಯನ್ನು ನಿರ್ಮಿಸುವ ಮೂಲಕ ಜನ ಜನಮಾನಸದಲ್ಲಿ ಉಳಿದಿದ್ದಾರೆ ಆದರೆ ನಿರ್ವಹಣೆ ಮಾಡಬೇಕಾದ ಅಧಿಕಾರಿಗಳ ನಿರ್ಲಕ್ಷದಿಂದ ಬಡ ರೋಗಿಗಳು ತುರ್ತು ಚಿಕಿತ್ಸೆಗಾಗಿ ಅಲೆಯಬೇಕಾಗಿದೆ ಎಂದು ವೈದ್ಯಾಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.