ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ ರಘುಮೂರ್ತಿ ಚಳ್ಳಕೆರೆ ನಗರದ ಶ್ರೀ ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ತಾಲ್ಲೂಕು ಮತ್ತು ಹೋಬಳಿ ಮಟ್ಟದ ಗ್ಯಾರೆಂಟಿ ಯೋಜನೆಗಳ ಜಾಗೃತಿ ಸಮಾವೇಶದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ತಾಲ್ಲೂಕು ಆಡಳಿತ ಹಾಗೂ ನಗರಸಭೆ ಮತ್ತು ತಾಲ್ಲೂಕು ಪಂಚಾಯತ್, ತಾಲ್ಲೂಕು ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿ ಇವರ ವತಿಯಿಂದ ಚಳ್ಳಕೆರೆ ತಾಲ್ಲೂಕು ಮತ್ತು ಹೋಬಳಿ ಮಟ್ಟದ ಗ್ಯಾರೆಂಟಿ ಯೋಜನೆಗಳ ಜಾಗೃತಿ ಸಮಾವೇಶದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ದಂಡಾಧಿಕಾರಿ ಗಳಾದ ರೇಹಾನ್ ಪಾಷಾ, ಕಾರ್ಯನಿರ್ವಾಹಣಾಧಿಕಾರಿ ಗಳಾದ ಶಶಿಧರ, ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳಾದ ಹರಿಪ್ರಸಾದ್, ನಗರಸಭೆ ಪೌರಾಯುಕ್ತ ರಾದ ಚಂದ್ರಪ್ಪ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಘವೇಂದ್ರ, ಸದಸ್ಯರಾದ ಕವಿತಾ ಬೋರಯ್ಯ, ಸುಜಾತ ಪ್ರಹ್ಲಾದ್, ಸುಮಾ ಭರಮಯ್ಯ, ಸುಮಕ್ಕ ಅಂಜಿನಪ್ಪ, ಜೈ ತುಂಬಿ ಮಾಲೀಕ ಸಾಬ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೀರಭದ್ರಪ್ಪ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಮಹಿಳೆಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.