ಚಳ್ಳಕೆರೆ : ಕೊವಿಡ್ ನಾಲ್ಕನೇ ಅಲೆಯ ಮುನ್ಸೂಚನೆಯಂತೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಸರಕಾರದ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸಬೇಕು ಎಂದು ತಹಶೀಲ್ದಾರ್ ಎನ್ ರಘುಮೂರ್ತಿ ಹೇಳಿದ್ದಾರೆ.
ತಾಲೂಕು ಕಛೇರಿಯಲ್ಲಿ ಪತ್ರಿಕೆಯಿಂದಿಗೆ ಮಾತನಾಡಿದ ಅವರು ಮಾಸ್ಕ್ ಇಲ್ಲದೆ ಇರುವವರು ದಂಡ ಕಟ್ಟಲು ಸಿದ್ದರಾಗಿ, ಜನರ ಸ್ವಾಥ್ಯ ಕಾಪಾಡುವ ನಿಟ್ಟಿನಲ್ಲಿ ಕೊವಿಡ್ ಮರುಕಳಿಸದಂತೆ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ನೀಡಿದ ಆದೇಶದ ಮೇರೆಗೆ ಪ್ರತಿಯೊಬ್ಬರೂ ಪಾಲಿಸಬೇಕು.
ಇಂದಿನಿಂದ ಮಾಸ್ಕ್ ಕಡ್ಡಾಯ ಎಂಬ ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರದ ಆದೇಶದಂತೆ ಸಾರ್ವಜನಿಕರು, ವರ್ತಕರು ಚಾಲಕರು, ಶಾಲಾ ಮಕ್ಕಳು ಇತ್ಯಾದಿ ಸಾರ್ವಜನಿಕರು ಜನಸಂದಣಿ ಇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಡಬೇಕು
ಒಂದು ವೇಳೆ ಮಾಸ್ಕ್ ಧರಿಸದೆ ಇದ್ದರೆ ಕನಿಷ್ಠ 500 ರಿಂದ 5 ಸಾವಿರ ರೂಪಾಯಿಗಳವರೆಗೆ ದಂಡ ಕಟ್ಟಬೇಕಾಗುತ್ತದೆ. ರಾಜ್ಯ ಸರ್ಕಾರದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಚಳ್ಳಕೆರೆ ತಹಶೀಲ್ದಾರ್ ಎನ್.ರಘುಮೂರ್ತಿ ಹೇಳಿದರು.