ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ಮೊಳಕಾಲ್ಮೂರು ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಟಿ. ವೀರಭದ್ರಪ್ಪ.
ಆಶೀರ್ವಾದ ಪಡೆದರು.

ನಾಯಕನಹಟ್ಟಿ: ಮುಂಬರುವ 2024 ರ ಲೋಕಸಭಾ ಚುನಾವಣೆಯ ಅಂಗವಾಗಿ ಜೆಡಿಎಸ್ ಕಾರ್ಯಕರ್ತರ ಸಭೆ ಬಿಜಿಕೆರೆ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಕರೆಯಲಾಗಿದೆ. ಎಂದು ಜೆಡಿಎಸ್ ಪರಾಜಿತ ಅಭ್ಯರ್ಥಿ ಟಿ ವೀರಭದ್ರಪ್ಪ. ಹೇಳಿದ್ದಾರೆ.

ಅವರು ಶುಕ್ರವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಚಿತ್ರದುರ್ಗ ಜಿಲ್ಲೆ ಉಸ್ತುವರಿಯಾದ ಪಾವಗಡದ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಫೆ.24 ರಂದು ಬಿ.ಜಿ.ಕೆರೆ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಮೊಳಕಾಲ್ಮುರು ಕ್ಷೇತ್ರದ ಜೆಡಿಎಸ್ ಪಕ್ಷದ ಕಾರ್ಯಕರ್ತರ ಆಗ ಪದಾಧಿಕಾರಿಗಳ ಸಭೆಯನ್ನು ಕರೆಯಲಾಗಿದೆ
ಆದ್ದರಿಂದ ಜೆ.ಡಿ.ಎಸ್.ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮೊಳಕಾಲ್ಮುರು ವಿಧಾಸಭಾಕ್ಷೇತ್ರದ ಜೆ.ಡಿ.ಎಸ್.ಪಕ್ಷದ ಪರಾಜಿತ ಅಭ್ಯರ್ಥಿಯಾದ ಟಿ.ವೀರಭದ್ರಪ್ಪ ಮನವಿ ಮಾಡಿಕೊಂಡರು.

ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮುರು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸಿದ್ದೆ ಜನ ನಮಗೆ ಆಶೀರ್ವಾದ ಮಾಡದೆ ಇರಬಹುದು ಆದರೆ ಈ ಕ್ಷೇತ್ರದ ಜನತೆ ಮುಂದೊಂದು ದಿನ ಆಶೀರ್ವಾದ ಮಾಡುತ್ತಾರೆ ಎಂಬ ಭರವಸೆ ನನಗಿದೆ ಆದ್ದರಿಂದ ಕ್ಷೇತ್ರದ ಮತದಾರರು ನನ್ನನ್ನು ಕೈ ಹಿಡಿಯುವ ಭರವಸೆ ಇದೆ ಆದ್ದರಿಂದ ಪಕ್ಷಕ್ಕಾಗಿ ದುಡಿಯುತ್ತೇನೆ ಮತ್ತು ಈ ಕ್ಷೇತ್ರದ ಪ್ರತಿಯೊಬ್ಬ ಮತದಾರರ ಕಷ್ಟ ಸುಖದಲ್ಲಿ ಭಾಗಿಯಾಗಿ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಹಗಲು ಇರಲು ಶ್ರಮಿಸುತ್ತೇನೆ ಆದ್ದರಿಂದ ಫೆಬ್ರವರಿ 24ರ ಬಿಜಿಕೆರೆಯಲ್ಲಿ ನಡೆಯಲಿರುವ ಜೆಡಿಎಸ್ ಪಕ್ಷದ ಸಭೆಗೆ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಪದಾಧಿಕಾರಿಗಳು ಭಾಗವಹಿಸುವಂತೆ ತಿಳಿಸಿದರು

ಈ ಸಂದರ್ಭದಲ್ಲಿ ಉಪಸ್ಥಿತರಾದ ಜೆ.ಡಿ.ಎಸ್.ಪಕ್ಷದ ಚಳ್ಳಕೆರೆ ತಾಲ್ಲೂಕು ಅಧ್ಯಕ್ಷ ಡಿ.ಬಿ.ಚೌಳಕೆರೆ ಕರಿಬಸಪ್ಪ, ಹನುಮಂತನಹಳ್ಳಿ ನಾಗರಾಜ್, ಅಬ್ಬೇನಹಳ್ಳಿ ಚನ್ನಬಸಪ್ಪ, ಓಬಯ್ಯನಹಟ್ಟಿ ಕುಮಾರ್, ಚನ್ನಪ್ಪ, ಧನುಂಜಯ್ ಹಾಗೂ ಜೆ.ಡಿ.ಎಸ್. ಪಕ್ಷದ ಕಾರ್ಯಕರ್ತರು ಪದಾಧಿಕಾರಿಗಳು ಇನ್ನಿತರರು ಉಪಸ್ಥಿತರಿದ್ದರು.

About The Author

Namma Challakere Local News
error: Content is protected !!