ಚಳ್ಳಕೆರೆ ನ್ಯೂಸ್ :
ಪೊಲೀಸ್ ದೌರ್ಜನ್ಯದ ವಿರುದ್ಧ ರಾಜ್ಯಾದ್ಯಾಂತ
ಹೋರಾಡುತ್ತೇವೆ ಎಂದು ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಹೇಳಿಕೆ ನೀಡಿದ್ದಾರೆ.
ಚಿತ್ರದುರ್ಗದಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಿಭಟನಾ ಸಮಯದಲ್ಲಿ
ರಾಜ್ಯ ಮಹಿಳಾ ಮೋರ್ಚಾದ ಕಾರ್ಯದರ್ಶಿ ಹಾಗೂ ದಲಿತ
ಮಹಿಳೆಯಾಗಿರುವ ಭಾರ್ಗವಿಯರನ್ನು ಪೊಲೀಸರು ದೂಡಿದ್ದು
ಸರಿಯಲ್ಲ ಎಂದು ಚಿತ್ರದುರ್ಗದ ಮಾಜಿ ಶಾಸಕ ಜಿಹೆಚ್ ತಿಪ್ಪಾರೆಡ್ಡಿ
ಹೇಳಿದರು.
ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ
ಮಾತಾಡಿದರು. ಪೊಲೀಸ್ ರ ವರ್ತನೆಯಿಂದ ಪ್ರಜ್ಞಾಹೀನ
ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರ ದೌರ್ಜನ್ಯ
ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸುತ್ತೇವೆಂದರು.