ಚಳ್ಳಕೆರೆ ನ್ಯೂಸ್ : ಚಳ್ಳಕೆರೆ ನಗರದ ಕೃಷಿ ಉತ್ಪನ ಮಾರುಕಟ್ಟೆ ಯಲ್ಲಿ ನಡೆದ ವಾಣಿಜ್ಯ ಮಳಿಗೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆಯಲ್ಲಿ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ ರಘುಮೂರ್ತಿ ಭಾಗವಹಿಸಿ ನೆರೆವೆರಿಸಿದರು.
ನಗರದ ಕೃಷಿ ಮಾರಾಟ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಚಳ್ಳಕೆರೆ ಇವರ ವತಿಯಿಂದ ಎ.ಪಿ.ಎಂ.ಸಿ.ಯಾರ್ಡ್ ನಲ್ಲಿ ನಡೆದ 2022-23ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆಯಡಿಯಲ್ಲಿ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ 250.00 ಲಕ್ಷ ರೂಗಳ ಅನುದಾನದಲ್ಲಿ ವಾಣಿಜ್ಯ ಮಳಿಗೆಗಳ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಗುತ್ತಿಗೆ ನೀಡಿದ ಅವಧಿಯಲ್ಲಿ ಕಾಮಗಾರಿ ಮುಗಿಸಿಕೊಡಬೇಕು, ಇನ್ನೂ ಈ ಭಾಗರದ ರೈತರಿಗೆ ಈ ಮಳಿಗೆಗಳು ವರದಾನವಾಗಲಿದ್ದು, ಮಾರುಕಟ್ಟೆಗೆ ಬಂದ ಮಾರಾಟದ ವಸ್ತುಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಮೂಲಕ ರೈತರಿಗೆ ಚೈತನ್ಯ ತುಂಬುವ ಕಾರ್ಯವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಕೃಷಿ ಮಾರುಕಟ್ಟೆ ಆಡಳಿತ ಅಧಿಕಾರಿ ಶ್ಯಾಮ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳಾದ ಸುರೇಶ್, ದಲ್ಲಾಲ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ವರ್ತಕರು, ನಗರಸಭೆ ಸದಸ್ಯರಾದ ಸಾವಿತ್ರಿ, ಮಾಜಿ ತಾಲ್ಲೂಕು ಪಂಚಾಯತ್ ಅಧ್ಯಕ್ಷರಾದ ಗದ್ದಿಗೆ ತಿಪ್ಪೇಸ್ವಾಮಿ, ಮುಖಂಡರುಗಳಾದ ಪಾತಲಿಂಗಪ್ಪ, ಟಿ.ಎ.ಟಿ. ಪ್ರಭುದೇವ್, ಸಿ.ಟಿ.ಶ್ರೀನಿವಾಸ್, ಕೋದಂಡರಾಮ, ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮತ್ತು ಅಧಿಕಾರಿಗಳು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು