ಬಗರ್ ಹುಕುಂ ಸಮಿತಿ ಸಭೆಯಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು: ಶಾಸಕ ಟಿ ರಘುಮೂರ್ತಿ ಭರವಸೆ
ಚಳ್ಳಕೆರೆ: ನಗರದ ತಾಲೂಕು ಕಚೇರಿ ಮುಂದೆ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ವತಿಯಿಂದ ಬಗರು ಸಾಗುವಳಿದಾರರಿಗೆ ಭೂಮಿ ಮಂಜೂರಾತಿ ನೀಡಲು ಆಗ್ರಹಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾತನಾಡಿದ ಹೋರಾಟ ಸಮಿತಿ ಸದಸ್ಯರುಗಳು ರಾಜ್ಯದ ಉದ್ದಗಲಕ್ಕೂ ಲಕ್ಷಾಂತರ ಸಂಖ್ಯೆಯಲ್ಲಿ ಸರ್ಕಾರಿ ಕಂದಾಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಭೂ ರಹಿತರಿಗೆ ಭೂಮಿ ಮಂಜೂರಾತಿ ನೀಡಿ ಭೂ ಒಡೆತನದ ಹಕ್ಕುಪತ್ರಗಳನ್ನು ನೀಡಬೇಕು ಎಂದು ಆಗ್ರಹಿಸಿದರು
ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಅವಿರತ ಹೋರಾಟದ ಫಲವಾಗಿ ಸರ್ಕಾರ ರಾಜ್ಯಾದ್ಯಂತ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಿದೆ ಈ ಆದೇಶವನ್ನು ಸಮಿತಿಯು ಸ್ವಾಗತಿಸಿದ್ದು ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಭೂಮಿಯ ವಿಚಾರದಲ್ಲಿ ಕೆಲವು ಸಕಾರಾತ್ಮಕ ತೀರ್ಮಾನಗಳು ಮಾಡಿದ್ದರು ನಮ್ಮ ಸಮಿತಿಯೊಂದಿಗೆ ಈ ವಿಚಾರದಲ್ಲಿ ಚರ್ಚೆ ನಡೆಸಲು ಕರೆಯಬೇಕಾಗಿದ್ದ ಸಭೆಯನ್ನು ಕರೆಯದೆ ವಿಳಂಬ ಮಾಡುತ್ತಿದೆ.
ಈ ಕುರಿತು ಸರ್ಕಾರಕ್ಕೆ ಒತ್ತಡ ಹಾಕುವ ಕಾರ್ಯ ನಡೆಯುತ್ತಿತ್ತು ಈಗಾಗಲೇ ರಚಿತವಾಗಿರುವ ಉನ್ನತ ಮಟ್ಟದ ಸಮಿತಿಯ ಸಭೆಯನ್ನು ಕರೆಯಬೇಕೆಂದು ಒತ್ತಾಯಿಸುತ್ತಿದ್ದೇವೆ ಸರ್ಕಾರ ಕೂಡಲೇ ಸೂಕ್ತ ನಿರ್ಧಾರವನ್ನು ಕೈಗೊಂಡು ನಮ್ಮ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಸ್ಥಳಕ್ಕೆ ಆಗಮಿಸಿದ ಶಾಸಕ ಟಿ ರಘುಮೂರ್ತಿ ಸರ್ಕಾರದ ನಿಯಮಾವಳಿಗಳ ಪ್ರಕಾರ ನಮನ ಐವತ್ತು 53 ಹಾಗೂ 57 ರಲ್ಲಿ ಅರ್ಜಿ ಸಲ್ಲಿಸಿರುವ ಬಗರ್ ಹುಕುಂ ಸಾಗುವಳಿದಾರರಿಗೆ ಭೂಮಿ ಮಂಜೂರಾತಿ ನೀಡಿ ಭೂ ಒಡೆತನದ ಹಕ್ಕುಪತ್ರಗಳನ್ನು ನೀಡಲು ಸರ್ಕಾರ ಸಿದ್ಧವಿದ್ದು ಇದರ ಬಗ್ಗೆ ಚರ್ಚಿಸಲು ಇಂದು ಸಭೆ ಕರೆದಿದ್ದೇನೆ ಕಾಲಕಾಲಕ್ಕೆ ಆಗಿರುವ ತಿದ್ದುಪಡಿಗಳನ್ನು ಪರಿಶೀಲನೆ ನಡೆಸಿ ಸಭೆಯಲ್ಲಿ ಚರ್ಚಿಸಿ ಸರ್ಕಾರದ ನಿಯಮಾವಳಿಗಳ ಪ್ರಕಾರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸದಸ್ಯರು ಹಾಗೂ ಸಾರ್ವಜನಿಕರು ಗ್ರಾಮೀಣ ಪ್ರದೇಶದ ರೈತಾಪಿ ವರ್ಗದವರು ಭಾಗವಹಿಸಿದ್ದರು.