ನಾಯಕನಹಟ್ಟಿ::ಮಾ.5. ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ತಂದೆ ತಾಯಿ ಗುರುಗಳ ಮಾತು ಅತಿ ಮುಖ್ಯವಾದದ್ದು ಎಂದು ಪಿಎಸ್ಐ ಶಿವಕುಮಾರ್ ಹೇಳಿದ್ದಾರೆ.

ಅವರು ಸೋಮವಾರ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಆವರಣದಲ್ಲಿ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ವತಿಯಿಂದ ಮತ್ತು ನಾಯಕನಹಟ್ಟಿ ಪೋಲೀಸ್ ಇಲಾಖೆ ಹಾಗೂ ಎಸ್ ಟಿ ಎಸ್ ಆರ್ ಶಾಲೆ ಇವರುಗಳು ಸಂಯುಕ್ತ ಆಶ್ರಯದಲ್ಲಿ ರಸ್ತೆ ಸುರಕ್ಷತಾ ಬೃಹತ್ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಸ್ತೆ ಸುರಕ್ಷತೆ ಮತ್ತು ನಿಯಮಗಳನ್ನು ಪಾಲನೆ ಮಾಡಿದರೆ, ಅಪಘಾತ ಹಾಗೂ ಇನ್ನಿತರ ಹಾನಿಗಳನ್ನು ತಡೆಗಟ್ಟಲು ಸಾಧ್ಯವಿದೆ. ಮೊದಲು ವಿದ್ಯಾರ್ಥಿಗಳು ಜಾಗೃತರಾಗಿ ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತೀವಿ ವಿದ್ಯಾರ್ಥಿಗಳು ಆದ್ದರಿಂದ ವೈಯಕ್ತಿಕ ಮಾಹಿತಿಯನ್ನು ಬೇರೆಯವರೊಂದಿಗೆ ಹಂಚಿಕೊಳ್ಳಬೇಡಿ ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಓದಿ ಉತ್ತಮ ಫಲಿತಾಂಶ ಪಡೆದಲ್ಲಿ ಮತ್ತು ಜ್ಞಾನಾರ್ಜನೆ ಹೆಚ್ಚಿಸಿಕೊಂಡಲ್ಲಿ ನಿಮ್ಮ ಭವಿಷ್ಯ ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗುತ್ತದೆ ತಂದೆ ತಾಯಿ ಕಷ್ಟಪಟ್ಟು ನಿಮ್ಮನ್ನ ಶಾಲೆಗೆ ಕಳಿಸುತ್ತಾರೆ ತಂದೆ- ತಾಯಿಯವರಿಗೆ ಕೀರ್ತಿ ತರುವಾಗಿ ಉತ್ತಮ ಶಿಕ್ಷಣ ಪಡೆದಲ್ಲಿ ಸಮಾಜದಲ್ಲಿ ಉತ್ತಮ ಪ್ರಜೆಯಾಗಿ ಬದುಕಲು ಸಾಧ್ಯ.
ಯುವ ಸಮುದಾಯಕ್ಕೆ ಮಾರಕವಾಗಿರುವ ಮತ್ತು ಅವರ ಜೀವನದ ಹಾದಿ ತಪ್ಪಿಸುತ್ತಿರುವ ಮಾದಕ ದ್ರವಗಳ ಹಾವಳಿ ತಪ್ಪಿಸಿ ನಶೆ ಮುಕ್ತ ಸಮಾಜ ನಿರ್ಮಿಸಲು ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕಾಗಿದೆ ಯುವ ಜನತೆ ಮಾದಕ ವಸ್ತುಗಳಿಂದ ರಕ್ಷಿಸಬೇಕಿದೆ ಮಾದಕ ವಸ್ತುಗಳ ಸೇವನೆಯಿಂದ ಕುಟುಂಬ ಸರ್ವನಾಶವಾಗುವುದಲ್ಲದೆ ದೇಶದ ಅಭಿವೃದ್ಧಿಗೆ ಮಾರಕವಾಗಿದೆ ಮಾದಕ ವಸ್ತುಗಳ ಉತ್ಪಾದನೆ ಮತ್ತು ಮಾರಾಟ ಜಾಲಗಳ ಪತ್ತೆಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕಾಗಿದೆ ಇತ್ತೀಚಿನ ದಿನಗಳಲ್ಲಿ ಯುವಕರು ಗುಟ್ಕಾ ತಂಬಾಕು ಮಧ್ಯಪಾನ ಗಾಂಜಾ ಸೇವನೆಯಿಂದ ತಮ್ಮ ಜೀವನವನ್ನೇ ಹಾಳು ಮಾಡುವುದಲ್ಲದೆ ಆತನ ಕುಟುಂಬವನ್ನೇ ಹಾಳು ಮಾಡುತ್ತದೆ ಹಾಗಾಗಿ ಪ್ರತಿಯೊಬ್ಬರೂ ಉತ್ತಮವಾದ ಆಹಾರವನ್ನು ಸೇವಿಸಿ ಉತ್ತಮವಾಗಿ ಆರೋಗ್ಯವನ್ನ ಕಾಪಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಶಶಿಧರ್ ಮಾತನಾಡಿ, ರಸ್ತೆ ಸುರಕ್ಷತೆ ಕಾಯ್ದೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವ ಮೂಲಕ ಅಮೂಲ್ಯ ಜೀವವನ್ನು ಉಳಿಸಲು ಎಲ್ಲರೂ ಮುಂದಾಗಬೇಕು. ಕಾಲೇಜಿಗೆ ಬರುವಾಗ ರಸ್ತೆ ನಿಯಮಗಳನ್ನು ಪಾಲನೆ ಮಾಡಬೇಕು. ರಸ್ತೆಯಲ್ಲಿ ನಡೆಯದೇ ಪಾದಚಾರಿ ಪಥದಲ್ಲೇ ನಡೆದುಕೊಂಡು ಬರುವುದನ್ನು ರೂಢಿಸಿಕೊಳ್ಳಿಎಂದರು.

ಶ್ರೀ ಗುರು ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ಎಂವೈಟಿ ಸ್ವಾಮಿ ಮಾತನಾಡಿ , ತಂದೆ- ತಾಯಿ ಹಾಗೂ ಅಕ್ಕಪಕ್ಕದ ಮನೆಯವರಿಗೂ ಸಹ ರಸ್ತೆ ನಿಯಮಗಳ ಬಗ್ಗೆ ತಿಳಿಸಿ, ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳಾದ ನೀವು ಬದಲಾವಣೆಯನ್ನು ಮಾಡಲು ಸಾಧ್ಯವಿದೆ ಎಂದರು.

ಇದೆ ಸಂದರ್ಭದಲ್ಲಿ ಪಿಎಸ್ಐ 2 ಕುಮಾರ್, ಎಎಸ್ಐ ತಿಪ್ಪೇಸ್ವಾಮಿ, ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ನಾ ಪದಾಧಿಕಾರಿಗಳು ಹಾಗೂ ಶಾಲೆಯ ಶಿಕ್ಷಕರು ಮತ್ತು ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Namma Challakere Local News
error: Content is protected !!