ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರಾಗಿ ನಿವೃತ್ತ ಐ.ಎ.ಎಸ್. ಅಧಿಕಾರಿ ಶಿವಯೋಗಿ ಸಿ. ಕಳಸದ ಅಧಿಕಾರ
ಚಿತ್ರದುರ್ಗ : ನಗರದ ಶ್ರೀ ಮುರುಘಾಮಠದಲ್ಲಿಂದು ನಿವೃತ್ತ ಐ.ಎ.ಎಸ್. ಅಧಿಕಾರಿ ಶಿವಯೋಗಿ ಸಿ. ಕಳಸದ ಅವರು ಮಾನ್ಯ ಸರ್ವೋಚ್ಛ ನ್ಯಾಯಾಲಯ ಹಾಗು ಕರ್ನಾಟಕ ಸರ್ಕಾರದ ಆದೇಶದನ್ವಯ ಇಂದು ಪೂರ್ವಾಹ್ನ ಶ್ರೀಮಠ ಮತ್ತು ಎಸ್.ಜೆ.ಎಂ. ವಿದ್ಯಾಪೀಠದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು.
ಕರ‍್ಯದರ್ಶಿ ಎ.ಜೆ. ಪರಮಶಿವಯ್ಯ ಅಧಿಕಾರ ಹಸ್ತಾಂತರಿಸಿದರು. ಶ್ರೀ ಬಸವಪ್ರಭು ಸ್ವಾಮಿಗಳು, ಎಸ್.ಎಂ.ಎಲ್. ತಿಪ್ಪೇಸ್ವಾಮಿ ಹಾಗು ಎಸ್.ಜೆ.ಎಂ. ವಿದ್ಯಾಪೀಠದ ನೌಕರವರ್ಗದವರಿದ್ದರು. ನಂತರ ಸಂಸ್ಥೆಯ ಕಾಲೇಜುಗಳಿಗೆ ಭೇಟಿ ನೀಡಿದರು.