ನಾಯಕನಹಟ್ಟಿ : ಶ್ರೀ ನಾಯಕನಹಟ್ಟಿ ಗುರುತಿಪ್ಪೆರುದ್ರಸ್ವಾಮಿ ಜಾತ್ರೆಗೆ ಬರುವ ಭಕ್ತರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಜಿಲ್ಲಾಧಿಕಾರಿ ವೆಂಕಟೇಶ್ ಹೇಳಿದರು.
ನಾಯಕನಹಟ್ಟಿ ಪಟ್ಟಣಕ್ಕೆ ಭೇಟಿ ನೀಡಿದ ಅವರು, ವಾಹನ ನಿಲುಗಡೆ ಸ್ಥಳ ಸೇರಿದಂತೆ ಜಾತ್ರೆ ನಡೆಯುವ ಸ್ಥಳಗಳನ್ನು ಪರಿಶೀಲನೆ ನಡೆಸಿ ಮಾತನಾಡಿದರು.
ಜಾತ್ರೆ ನಡೆಯುವ ಸ್ಥಳದಲ್ಲಿ ಸಿ.ಸಿ ರಸ್ತೆ ಕಾಮಗಾರಿ ನಡೆಯುತ್ತಿದ್ದು ಜಾತ್ರೆ ಆರಂಭಕ್ಕೂ ಮುನ್ನವೇ ಕಾಮಗಾರಿ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.
ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಗೆ ಬರುವಂತ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರವಹಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು
ಮಾರ್ಚ್ 11 ರಿಂದ ಪ್ರಾರಂಭವಾಗುವ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಏಪ್ರಿಲ್ 1 ರಂದು ಜಾತ್ರೆಗೆ ತೆರೆ ಬೀಳಲಿದೆ. ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಗೆ ಸುಮಾರು 5 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆ ಇದೆ, ಭಕ್ತಾದಿಗಳಿಗೆ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ, ನೆರಳಿನ ವ್ಯವಸ್ಥೆ, ವಾಹನ ನಿಲುಗಡೆ ಸ್ಥಳ, ಚೆಕ್ ಪೋಸ್ಟ್ ಸೇರಿದಂತೆ ಯಾವುದೇ ತೊಂದರೆ ಆಗದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.
ಅವರು ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ನಂತರ ಒಳಮಠದ ಸಮುದಾಯ ಭವನ ಮುಂಭಾಗದಲ್ಲಿರುವ ಸೇತುವೆ ರಸ್ತೆಯನ್ನು ವೀಕ್ಷಣೆ ಮಾಡಿ ಮಾತನಾಡಿದ ಅವರು ಶ್ರೀ ಗುರು ತಿಪ್ಪೇರುದ್ರಸ್ವಾಮಿ ಜಾತ್ರೆಗೆ ಬರುವಂತ ಭಕ್ತಾದಿಗಳಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವ ಸಲುವಾಗಿ ಸೇತುವೆಯನ್ನು ಜಾತ್ರೆ ವೇಳೆಗೆ ಬಿಟ್ಟು ಕೊಡಬೇಕೆಂದು ಗುತ್ತಿಗೆದಾರರಿಗೆ ದೂರವಾಣಿ ಮೂಲಕ ಸೂಚನೆಯನ್ನು ನೀಡಿದರು.
ಇನ್ನೂ ಚಳ್ಳಕೆರೆ ತಹಶೀಲ್ದಾರ್ ರೇಹಾನ್ ಪಾಷಾ ಅವರಿಗೆ, ರಸ್ತೆಯ ಅಕ್ಕ ಪಕ್ಕದಲ್ಲಿ ಮತ್ತು ಜಾಲಿ ಗಿಡಗಳು ತಗ್ಗು ಗುಂಡಿ ರಸ್ತೆಗಳು ಸ್ವಚ್ಛತೆಯಿಂದ ಕೂಡಿರಬೇಕು, ಬರುವಂತ ಭಕ್ತಾದಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಸಂಚಾರ ವ್ಯವಸ್ಥೆ ವಿದ್ಯುತ್ ಸೇರಿದಂತೆ ವ್ಯವಸ್ಥೆ ಎಲ್ಲ ಕಲ್ಪಿಸಿಕೊಡಬೇಕೆಂದು ಸೂಚನೆಯನ್ನು ನೀಡಿದರು.
ನಂತರ ಚಳ್ಳಕೆರೆ ರಸ್ತೆಯ ವಿವಿಧಡೆ ವಾಹನ ನಿಲುಗಡೆಯ ಸ್ಥಳಗಳಿಗೆ ಭೇಟಿ ನೀಡಿ ವೀಕ್ಷಣೆಯನ್ನು ಮಾಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರೇಹಾನ್ ಪಾಷಾ, ಪಿಎಸ್ಐ ಕುಮಾರ್, ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಸಿಬ್ಬಂದಿ ಎಸ್. ಸತೀಶ್, ಪಟ್ಟಣ ಪಂಚಾಯತಿ ದ್ವಿತೀಯ ದರ್ಜೆ ಸಹಾಯಕ ಟಿ. ತಿಪ್ಪೇಸ್ವಾಮಿ ಸೇರಿದಂತೆ ಇತರರು ಇದ್ದರು.