ಚಿತ್ರದುರ್ಗ ಸುದ್ದಿ :
ಚಿತ್ರದುರ್ಗ ಜಿಲ್ಲೆಯಲ್ಲಿ ಇಂದು ಪತ್ರಿಕಾ ಭವನದಲ್ಲಿ ಚಿನ್ಮೂಲಾ ದ್ರಿ ಸಾಹಿತ್ಯ ವೇದಿಕೆ ಹಾಗೂ ಶ್ರೀ ಗಾನಯೋಗಿ ಸಂಗೀತ ಬಳಗ ಚಿತ್ರದುರ್ಗ ಇವರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಉಪನ್ಯಾಸ,
ತಿಂಗಳ ವಿಶೇಷ ವ್ಯಕ್ತಿ ಪರಿಚಯ ಮತ್ತು ಕವನ ವಾಚನ ಹಾಗೂ ಗೀತಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶ್ರೀಮತಿ ಸವಿತಾ ಸಂಪತ್ ರವರು ಪ್ರಾರ್ಥನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ನಂತರ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಚಿತ್ರದುರ್ಗ ಜಿಲ್ಲೆಯ ಖ್ಯಾತ ವಕೀಲರು ಹಾಗೂ ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆಯ ಗೌರವಾಧ್ಯಕ್ಷರು ಆದ ಶ್ರೀಯುತ ಬಿ.ಕೆ ರಹಮತ್ ಉಲ್ಲಾ ರವರು ಹಾಗೂ ಇನ್ನಿತರೆ ವೇದಿಕೆ ಮೇಲಿರುವ ಎಲ್ಲ ಗಣ್ಯ ಮಾನ್ಯರು ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.