ಹಾಡು ಹಗಲೇ ಮನೆಗೆ ಕನ್ನ ಹಾಕಿದ ಕಳ್ಳರು ಬೆಚ್ಚಿ ಬಿದ್ದ ಸಾರ್ವಜನಿಕರು

ಚಳ್ಳಕೆರೆ: ನಗರದ ಗೊಲ್ಲರಹಟ್ಟಿ ಸಮೀಪ ತಿಪ್ಪೇಸ್ವಾಮಿ ಎಂಬುವರ ಮನೆಯಲ್ಲಿ ಹಾಡುಹಗಲೇ ಕಳ್ಳತನ ಪ್ರಕರಣ ನಡೆದಿದ್ದು 40,000 ನಗದು ಹಾಗೂ 8ತೊಲ ಬಂಗಾರ ಮತ್ತು ಬೆಳ್ಳಿ ಆಭರಣಗಳು ಕಳ್ಳತನವಾಗಿದ್ದು ಸಾರ್ವಜನಿಕರನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ.

ಮನೆಯ ಮಾಲಿಕ ತಿಪ್ಪೇಸ್ವಾಮಿಯವರು ಟೈಲರಿಂಗ್ ವೃತ್ತಿ ಮಾಡುತ್ತಿದ್ದು ಪತ್ನಿ ಮಂಜುಳಮ್ಮ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಟೈಲರಿಂಗ್ ಕಲಿಯಲು ಹೋಗುತ್ತಿದ್ದರು ಪುತ್ರ ಮಾರುತಿ ಬ್ಯಾಂಕಿನಲ್ಲಿ ಕೆಲಸ ನಿರ್ವಹಿಸಲು ಹೋಗಿದ್ದರಿಂದ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಧ್ಯಾಹ್ನ ಸುಮಾರು 12 ಗಂಟೆ ಸಮಯದಲ್ಲಿ ಈ ಕಳ್ಳತನ ಪ್ರಕರಣ ನಡೆದಿದ್ದು ಅನುಮಾನಗೊಂಡ ಅಕ್ಕ ಪಕ್ಕದ ಮನೆಯವರು ವಿಷಯ ತಿಳಿಸಿದಾಗ ಮನೆಯ ಮಾಲೀಕರು ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ ಪೊಲೀಸರು ಸ್ಥಳಕ್ಕೆ ಧಾವಿಸಿ ಮಾಹಿತಿ ಪಡೆದಿದ್ದಾರೆ ಪಿಎಸ್ಐ ಸತೀಶ್ ನಾಯಕ್ ಪಿಎಸ್ಐ ಶಿವರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

About The Author

Namma Challakere Local News
error: Content is protected !!