ಲೋಕಸಭಾ ಚುನಾವಣೆ ಹಿನ್ನೆಲೆ ಸ್ಟ್ರಾಂಗ್ ರೂಮ್ ಬಂದೋಬಸ್ತ್ ವ್ಯವಸ್ಥೆ ಪರಿಶೀಲನೆ ನಡೆಸಿದ ಡಿವೈಎಸ್ಪಿ ಟಿ ಬಿ ರಾಜಣ್ಣ
ಚಳ್ಳಕೆರೆ: ನಗರದ ಹೆಚ್ ಪಿ ಪಿ ಸಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತಪೆಟ್ಟಿಗೆಗಳನ್ನು ಇರಿಸಿರುವ ಸ್ಟ್ರಾಂಗ್ ರೂಮ್ ಗಳನ್ನು ನಗರ ಪೊಲೀಸ್ ಠಾಣೆಯ ಡಿವೈಎಸ್ಪಿ ಟಿಬಿ ರಾಜಣ್ಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸ್ಟ್ರಾಂಗ್ ರೂಮ್ ಬಳಿ ಅಳವಡಿಸಿರುವ ಸಿಸಿ ಕ್ಯಾಮೆರಾ ಬ್ಯಾರಿಕೆಡ್ ಹಾಗೂ ಭದ್ರತಾ ಸಿದ್ಧತೆ ಕರ್ತವ್ಯದಲ್ಲಿರುವ ಸಿಬ್ಬಂದಿಯ ಹಾಜರಾತಿ ಪುಸ್ತಕ ಸೇರಿದಂತೆ ಎಲ್ಲವುಗಳನ್ನು ಪರಿಶೀಲನೆ ನಡೆಸಿದರು ಈ ವೇಳೆ ಮಾತನಾಡಿದ ಅವರು ತಾಲೂಕಿನಲ್ಲಿ ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಚುನಾವಣಾ ಆಯೋಗದ ಆದೇಶದಂತೆ ಪೊಲೀಸ್ ಇಲಾಖೆ ಎಲ್ಲಾ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು ಪೊಲೀಸ್ ಸಿಬ್ಬಂದಿ ದಿನದ 24 ಗಂಟೆ ಕರ್ತವ್ಯ ನಿರ್ವಹಿಸುತ್ತಾರೆ ಈಗಾಗಲೇ ಅಧಿಕಾರಿಗಳು ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದೋಬಸ್ತ ವ್ಯವಸ್ಥೆ ಕಲ್ಪಿಸಲಾಗಿದೆ ಸಿಬ್ಬಂದಿಗಳಿಗೆ ಸಲಹೆ ಸೂಚನೆಗಳನ್ನು ನೀಡಲಾಗಿದ್ದು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್ ಸೇರಿದಂತೆ ಪೊಲೀಸ್ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.