ಇಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಟಿ ರಘುಮೂರ್ತಿ ರವರು ಚಳ್ಳಕೆರೆ ತಾಲ್ಲೂಕಿನ ಸಿದ್ದೇಶ್ವರನದುರ್ಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರುಗಳ ಸಭೆಯಲ್ಲಿ ಪಾಲ್ಗೊಂಡರು.
ಚಳ್ಳಕೆರೆ ತಾಲೂಕಿನ ಸಿದ್ದೇಶ್ವರನದುರ್ಗ ,ಪಿ ಮಹದೇವಪುರ , ದೊಡ್ಡಚೆಲ್ಲೂರ್ , ಟಿ ಎನ್ ಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಮುಖಂಡರುಗಳ ಸಭೆಯಲ್ಲಿ ಪಾಲ್ಗೊಂಡು ಕುಂದು ಕೊರತೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವಂತೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಬಿ. ಪಿ.ಪ್ರಕಾಶ್ ಮೂರ್ತಿ,ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರಾದ ಗದ್ದಿಗೆ ತಿಪ್ಪೇಸ್ವಾಮಿ , ಪರುಶುರಾಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜಿ.ಟಿ.ಶಶಿಧರ,ನಗರಸಭಾ ಸದಸ್ಯರಾದ ಬಿ.ಟಿ.ರಮೇಶ್ ಗೌಡ ಎಂ.ಜೇ ರಾಘವೇಂದ್ರ ಮುಖಂಡರುಗಳಾದ , ಚನ್ನಕೇಶವ, ರೆಡ್ಡಿಹಳ್ಳಿ ಶಿವಣ್ಣ , ಚೌಳೂರು ಬಸವರಾಜ್ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಗ್ರಾಮದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು