ಚಳ್ಳಕೆರೆ ನ್ಯೂಸ್ :
ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು
ನಾಪಮತ್ರ ಸಲ್ಲಿಸಿದ್ದಾರೆ.
ಇನ್ನೂ ಗುರುವಾರ ಮಧ್ಯಾಹ್ನ 3 ಗಂಟೆಗೆ
ಚಿತ್ರದುರ್ಗದ ಲೋಕಸಭಾ ಚುನಾವಣಾ ಕಾರ್ಯಾಲಯಕ್ಕೆ ಬಿಜೆಪಿಯ
ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಜೊತೆ ಬಂದ ಗೋವಿಂದ
ಕಾರಜೋಳ ಅವರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ
ವೆಂಕಟೇಶ್ ಟಿ ಅವರಿಗೆ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ನಾಮಪತ್ರ
ಸಲ್ಲಿಕೆ ಮಾಡಿದ್ದಾರೆ.
ಇನ್ನೂ ಈ ಸಂದರ್ಭದಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ
ಬಿ ವೈ ವಿಜಯೇಂದ್ರ, ಮಾಜಿ ಸಚಿವ ಮಾಧು ಸ್ವಾಮಿ, ಮಾಜಿ
ಮುಖ್ಯಮಂತ್ರಿ ಸದಾನಂದ ಗೌಡ ಸೇರಿದಂತೆ ಹಲವರು ಹಾಜರಿದ್ದರು.