ಚಳ್ಳಕೆರೆ ನ್ಯೂಸ್ :
2024 ರ ಲೋಕಸಭಾ ಅಖಾಡಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯದಿನವಾದ್ದರಿಂದ ಕಲ್ಲಿನಕೋಟೆ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು.
ಇನ್ನೂ ನಾಮಪತ್ರ ಸಲ್ಲಿಕೆ ವೇಳೆ ವಿವಿಧ ವಿಧಾನ ಸಭಾ ಕ್ಷೇತ್ರಗಳಿಂದ ಕಾರ್ಯಕರ್ತರು, ಮುಖಂಡರು ವಾಹನಗಳ ಮೂಲಕ ಆಗಮಿಸಿದ್ದರು.
ಅದರಂತೆ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಆಗಮಿಸಿದ ಮಾಜಿ ಸಂಸದ ಹಾಗು ಕಾಂಗ್ರೆಸ್ ನ ಕಾರ್ಯಧ್ಯಕ್ಷರಾದ ಬಿಎನ್.ಚಂದ್ರಪ್ಪ ಜೊತೆಗೆ ಜಿಲ್ಲಾ ಉಸ್ತುವಾರಿ ಮಂತ್ರಿ ಡಿ.ಸುಧಾಕರ್,
ಚಳ್ಳಕೆರೆ ವಿಧಾನ ಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ವಿಧಾನ ಸಭಾ ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ, ಚಿತ್ರದುರ್ಗ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಹಿರಿಯೂರಿನ ಮಾಜಿ ಶಾಸಕಿ ಪೂರ್ಣಿಮ ಶ್ರೀನಿವಾಸ್, ಇತರರು ಸೇರಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ರವರಿಗೆ ನಾಮಪತ್ರ ಸಲ್ಲಿಸಿದರು.