ಚಳ್ಳಕೆರೆ : ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ್ ರಾಮ್ ರವರ 117ನೇ ಜಯಂತಿಯನ್ನು ಜನಪ್ರತಿನಿಧಿಗಳು ಅಧಿಕಾರಿಗಳೊಟ್ಟಿಗೆ ಸೇರದೆ ಸರಳವಾಗಿ ಬಾಬು ಜಗಜೀವನ್ ರಾಮ್ ರವರ ಪ್ರತಿಮೆಗೆ ಹೂವು ಮಾಲೆ ಹಾಕಿ ಶುಭಾಷಯ ಕೋರಿದರು.
ಇನ್ನೂ ದೇಶದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿ ಇರುವ ಕಾರಣ ಹಸಿರು ಕ್ರಾಂತಿಯ ಹರಿಕಾರನಿಗೆ ಕ್ಷೇತ್ರದ ಜನಪ್ರತಿನಿಧಿಗಳು ಹೂವು ಮಾಲೆ ಹಾಕಿ ಸರಳವಾಗಿ ಜಯಂತಿಯ ಶುಭಾಷಯಗಳನ್ನು ತಿಳಿಸಿದರು.
ಸಹಾಯಕ ಚುನಾವಣೆ ಅಧಿಕಾರಿ ಬಿ.ಆನಂದ್, ತಹಶೀಲ್ದಾರ್ ರೇಹಾನ್ ಪಾಷ, ತಾಪಂ.ಕಾರ್ಯನಿರ್ವಾಹಕ ಅಧಿಕಾರಿ ಲಕ್ಷö್ಮಣ್, ನಗರಸಭೆ ಪೌರಾಯುಕ್ತ ಕೆ.ಜೀವನ್ ಕಟ್ಟಿಮನಿ, ಮಕ್ಕಳ ಕಲ್ಯಾಣ ಅಭಿವೃದ್ದಿ ಇಲಾಖೆ ಅಧಿಕಾರಿ ಹರಿಪ್ರಸಾದ್, ತಾಪಂ.ಸಹಾಕ ನಿದೇರ್ಶಕ ಸಂಪತ್ ಕುಮಾರ್, ಸಮಾಜ ಕಲ್ಯಾಣ ಅಧಿಕಾರಿ ದೇವ್ಲಾನಾಯ್ಕ್, ಇತರರು ಪಾಲ್ಗೊಂಡಿದ್ದರು.